Monday, June 8, 2026
Homeಕರಾವಳಿಪಾಲ್ತಾಡಿ ರಾಮಕೃಷ್ಣ ಆಚಾರ್ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಂತಾಪ

ಪಾಲ್ತಾಡಿ ರಾಮಕೃಷ್ಣ ಆಚಾರ್ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಂತಾಪ

- Advertisement -
- Advertisement -

ಬೆಂಗಳೂರು: ವಿದ್ವಾಂಸ ಪಾಲ್ತಾಡಿ ರಾಮಕೃಷ್ಣ ಆಚಾರ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ಸಂತಾಪ ಸೂಚಿಸಿದ್ದಾರೆ.

ತುಳು ಅಕಾಡೆಮಿ ಅಧ್ಯಕ್ಷರಾಗಿ ತುಳು ಭಾಷೆಯ ಬೆಳವಣಿಗೆಗೆ ಶ್ರಮಿಸಿದ್ದ ರಾಮಕೃಷ್ಣ ಆಚಾರ್ ಅವರು, ಕಾವ್ಯ, ಸಣ್ಣಕತೆ, ನಾಟಕ, ಸಂಶೋಧನೆ, ವಿಮರ್ಶೆ ಮತ್ತು ಜಾನಪದ ಕ್ಷೇತ್ರಗಳಲ್ಲಿ ಗಮನಾರ್ಹ ಕೊಡುಗೆ ನೀಡಿದ್ದಾರೆ ಎಂದು ವಿಜಯೆಂದ್ರ ಹೇಳಿದ್ದಾರೆ.

ಡಾ. ಪಾಲ್ತಾಡಿ ರಾಮಕೃಷ್ಣ ಆಚಾರ್ ಅವರಿಗೆ ಜಾನಪದ ಅಕಾಡೆಮಿ ಗೌರವ ಪ್ರಶಸ್ತಿ, ತುಳು ಅಕಾಡೆಮಿ ಪ್ರಶಸ್ತಿ ಮತ್ತು ಉತ್ತಮ ಶಿಕ್ಷಕ ಪ್ರಶಸ್ತಿ ಸೇರಿದಂತೆ ಹತ್ತಾರು ಗೌರವಗಳು ಸಂದಿವೆ ಎಂದು ಸ್ಮರಿಸಿರುವ ವಿಜಯೇಂದ್ರ, ಕುಟುಂಬಸ್ಥರು, ಬಂಧುಮಿತ್ರರು ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

ತುಳು ಭಾಷಾ ಅಭಿವೃದ್ದಿಗೆ ಶ್ರಮಿಸಿದ್ದ ಹಿರಿಯ ವಿದ್ವಾಂಸರಾಗಿದ್ದ ಡಾ. ಪಾಲ್ತಾಡಿ ರಾಮಕೃಷ್ಣ ಆಚಾರ್ ನಿನ್ನೆ ನಿಧನರಾಗಿದ್ದರು

- Advertisement -

Latest News

error: Content is protected !!