- Advertisement -
- Advertisement -
ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದು ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ.
ಬೆಂಗಳೂರಿನ ಶಿವಾನಂದ ಸರ್ಕಲ್ ಬಳಿ ಇರುವ ಸತೀಶ್ ಜಾರಕಿಹೊಳಿ ಅವರ ನಿವಾಸಕ್ಕೆ ಬಿ.ವೈ. ವಿಜಯೇಂದ್ರ ಭೇಟಿಯಾಗಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಸತೀಶ್ ಜಾರಕಿಹೊಳಿ ಭೇಟಿಗೂ ಮುನ್ನ ಮಾತನಾಡಿದ ಬಿ.ವೈ. ವಿಜಯೇಂದ್ರ, ಲೋಕೋಪಯೋಗಿ ಇಲಾಖೆಯ ಕಾರ್ಯದ ನಿಮಿತ್ತ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗುತ್ತಿದ್ದೇನೆ. ಇದರಲ್ಲಿ ರಾಜಕೀಯ ಮಾಡಬೇಡಿ ಎಂದು ತಿಳಿಸಿದ್ದಾರೆ.
- Advertisement -