Saturday, July 11, 2026
Homeತಾಜಾ ಸುದ್ದಿಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಿ.ವೈ ವಿಜಯೇಂದ್ರ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಿ.ವೈ ವಿಜಯೇಂದ್ರ

- Advertisement -
- Advertisement -

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ಅಧಿಕಾರ ಸ್ವೀಕರಿಸಿದ್ದಾರೆ.

ಮೊದಲಿಗೆ ಬಿಜೆಪಿಯ ಜಗನ್ನಾಥ ಭವನದಲ್ಲಿ ನಡೆದಂತ ಹೋಮದಲ್ಲಿ ಶಾಸಕ ಬಿವೈ ವಿಜಯೇಂದ್ರ ಅವರು ಭಾಗಿಯಾದರು. ಬೆಳಗ್ಗೆ 10.00 ಗಂಟೆಗೆ ನಡೆದಂತ ಪೂರ್ಣಾಹುತಿ ಹೋಮ ಮುಕ್ತಾಯಗೊಂಡ ನಂತ್ರ, ನಿಕಟ ಪೂರ್ವ ರಾಜ್ಯಾಧ್ಯಕ್ಷರಾದ ನಳಿನ್‍ಕುಮಾರ್ ಕಟೀಲ್ ಅವರು, ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಗೆ ಅಧಿಕಾರವನ್ನು ಹಸ್ತಾಂತರಿಸಿದರು. ಈ ಮೂಲಕ ರಾಜ್ಯ ಬಿಜೆಪಿ ಘಟಕದ ನೂತನ ಅಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ಪದಗ್ರಹಣ ಮಾಡಿದ್ದಾರೆ.

ಈ ವೇಳೆಯಲ್ಲಿ ಸಂಸದ ಬಿ.ವೈ ರಾಘವೇಂದ್ರ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಮಾಜಿ ಸಚಿವ ಆರ್ ಅಶೋಕ್, ಗೋವಿಂದ ಕಾರಜೋಳ, ಮುನಿರತ್ನ, ಅರಗ ಜ್ಞಾನೇಂದ್ರ, ಬಿ ಶ್ರೀರಾಮುಲು, ತೇಜಸ್ವಿ ಸೂರ್ಯ ಸೇರಿದಂತೆ ಹಲವರು ಭಾಗಿಯಾಗಿದ್ದರು.

 

- Advertisement -

Latest News

error: Content is protected !!