Thursday, June 4, 2026
Homeಕರಾವಳಿಉಡುಪಿಉಡುಪಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ರೋಡ್ ಶೋ

ಉಡುಪಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ರೋಡ್ ಶೋ

- Advertisement -
- Advertisement -

ಉಡುಪಿ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಪರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ರೋಡ್ ಶೋ ನಡೆಸಿದರು.

ಬಿಜೆಪಿ ಯುವ ಮೋರ್ಛಾ ಆಯೋಜಿಸಿದ್ದ ಯುವ ಭಾರತ್ ಸಮಾವೇಶಕ್ಕೂ‌ ಮುನ್ನ ರೋಡ್ ಶೋ ನಡೆಯಿತು.

ಸಮಾವೇಶ ಉದ್ಘಾಟಿಸಿ ಮಾತನಾಡಿದ ಬಿ.ವೈ. ವಿಜಯೇಂದ್ರ, ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ದೃಷ್ಟಿಯಿಂದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ದಾಖಲೆಯ ಮತಗಳ ಅಂತರಗಳಿಂದ ಗೆಲ್ಲಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್‍ ಕುಮಾರ್, ಶಾಸಕರಾದ ಯಶಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ಯುವ ಮೋರ್ಛಾ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಪೂಂಜ, ಮಾಜಿ ಶಾಸಕ ರಘುಪತಿ ಭಟ್, ಬಿಜೆಪಿ ಉಡುಪಿ‌ ಜಿಲ್ಲಾಧ್ಯಕ್ಷ ಕಿಶೋರ್‌ ಉಪಸ್ಥಿತರಿದ್ದರು.

- Advertisement -

Latest News

error: Content is protected !!