ಮಂಗಳೂರು: ವಿಧಾನ ಪರಿಷತ್‌ಗೆ ನಡೆಯುವ ಉಪಚುನಾವಣೆ ಹಿನ್ನೆಲೆಯಲ್ಲಿ ದ.ಕ ಸ್ಥಳೀಯ ಸಂಸ್ಥೆಗಳಿಂದ ಹಮ್ಮಿಕೊಂಡಿರುವ ಅ.15ರಂದು ಬಂಟ್ವಾಳ ಬಂಟರ ಭವನದಲ್ಲಿ ದ.ಕ. ಜಿಲ್ಲಾ ಮಟ್ಟದ ಬಿಜೆಪಿ ಸಮಾವೇಶ ನಡೆಯಲಿದೆ. ಅದರಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಸಮಾವೇಶ ಉದ್ಘಾಟನೆಯು ಬೆಳಗ್ಗೆ 10.30ಕ್ಕೆ ನಡೆಯಲಿದ್ದು, ಎಲ್ಲ ವಿಧಾನ ಸಭಾ ಕ್ಷೇತ್ರಗಳ ಸ್ಥಳೀಯಾಡಳಿತಗಳ ಸುಮಾರು 3 ಸಾವಿರ ಮಂದಿ ಚುನಾಯಿತ ಮತದಾರರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎನ್ನಲಾಗಿದೆ. ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಕ್ಯಾ|ಬ್ರಿಜೇಶ್ ಚೌಟ ಹಾಗೂ ರಾಜ್ಯ ಮಟ್ಟದ ನಾಯಕರೂ ಭಾಗವಹಿಸಿದ್ದಾರೆ. ಅವಿಭಜಿತ ದ.ಕ. ಜಿಲ್ಲೆಯಲ್ಲಿ ಸುಮಾರು 6,040 ಮಂದಿ ಮತದಾರರಿದ್ದು, ಬಿಜೆಪಿ ಸಂಘಟನಾತ್ಮಕವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಈ ಬಾರಿಯೂ ಬಿಜೆಪಿ ಅಭ್ಯರ್ಥಿಯನ್ನು ಸ್ಥಳೀಯಾಡಳಿತ ಸದಸ್ಯರು ಬೆಂಬಲಿಸುವ ಭರವಸೆ ಇದೆ ಎಂದರು.
ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್, ಚುನಾವಣ ಉಸ್ತುವಾರಿ ಕ್ಯಾ|ಗಣೇಶ್ ಕಾರ್ಣಿಕ್, ಮತ್ತಿತರರು ಉಪಸ್ಥಿತರಿದ್ದರು.