Thursday, June 4, 2026
Homeಕರಾವಳಿನಳೀನ್ ಕುಮಾರ್ ಕಟೀಲ್ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

ನಳೀನ್ ಕುಮಾರ್ ಕಟೀಲ್ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

- Advertisement -
- Advertisement -

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ‌.ವೈ. ವಿಜಯೇಂದ್ರ ಇಂದು ದಕ್ಷಿಣ ಕನ್ನಡ ಸಂಸದ ಮತ್ತು ನಿಕಟಪೂರ್ವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ನಿವಾಸಕ್ಕೆ ಭೇಟಿ ನೀಡಿದರು.

ಮಂಗಳೂರಿನ ತಮ್ಮ ನಿವಾಸಕ್ಕೆ ಭೇಟಿ ನೀಡಿದ ವಿಜಯೇಂದ್ರ ಅವರನ್ನು ನಳೀನ್ ಕುಮಾರ್ ಕಟೀಲ್ ಆತ್ಮೀಯವಾಗಿ ಸ್ವಾಗತಿಸಿದರು. ಈ ವೇಳೆ ನಳೀನ್ ಕುಮಾರ್ ಕುಟುಂಬ ಸದಸ್ಯರು ಮತ್ತು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದ್ರೆ ಉಪಸ್ಥಿತರಿದ್ದರು.

ಇದೇ ವೇಳೆ ವಿಜಯೇಂದ್ರ ಮಾಜಿ ಶಾಸಕ ಯೋಗೀಶ್ ಭಟ್ ಮತ್ತು ಕೊಡಿಯಾಲ್ ಬೈಲ್ ನ ಬಿಜೆಪಿ ಬೂತ್ 65ರ ಅಧ್ಯಕ್ಷ ಯಶವಂತ ಕುದ್ರೋಳಿ ಅವರ ನಿವಾಸಕ್ಕೂ ಭೇಟಿ ನೀಡಿ ಮಾತುಕತೆ ನಡೆಸಿದರು.

ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ವಿಜಯೇಂದ್ರ ಮೊದಲ ಬಾರಿಗೆ ಇಂದು ಮಂಗಳೂರಿಗೆ ಭೇಟಿ ನೀಡಿದ್ದರು.

- Advertisement -

Latest News

error: Content is protected !!