Saturday, June 6, 2026
Homeತಾಜಾ ಸುದ್ದಿರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ ದಿ.ಅನಂತ್ ಕುಮಾರ್ ಪುತ್ರಿಯ ಟ್ವೀಟ್: ಜೆಡಿಎಸ್ ಪರ ಬ್ಯಾಟ್...

ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ ದಿ.ಅನಂತ್ ಕುಮಾರ್ ಪುತ್ರಿಯ ಟ್ವೀಟ್: ಜೆಡಿಎಸ್ ಪರ ಬ್ಯಾಟ್ ಬೀಸಿದ ವಿಜೇತಾ ಅನಂತ್ ಕುಮಾರ್

- Advertisement -
- Advertisement -

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸದ್ಯ ಒಂದರ ಹಿಂದೆ ಒಂದರಂತೆ ನಡೆಯುತ್ತಿರುವ ಬೆಳವಣಿಗೆಗಳು ಸಾಕಷ್ಟು ಕುತೂಹಲ ಮೂಡಿಸಿವೆ. ಇದರ ಬೆನ್ನಲ್ಲೇ ದಿವಂಗತ ಅನಂತ್ ಕುಮಾರ್ ಪುತ್ರಿ ವಿಜೇತಾ ಅನಂತಕುಮಾರ್ ಅವರು ಮಾಡಿರುವ ಟ್ವೀಟ್ ಚರ್ಚೆಗೆ ಗ್ರಾಸವಾಗಿದೆ.

ಮಾಜಿ ಕೇಂದ್ರ ಸಚಿವ ದಿವಗಂತ ಅನಂತಕುಮಾರ್ ಅವರ ಪುತ್ರಿ ವಿಜೇತಾ, ‘ಕರ್ನಾಟಕ ರಾಜಕೀಯ ನಿಜಕ್ಕೂ ಆಸಕ್ತಿದಾಯಕ ಏಕೆ? ಜೆಡಿಎಸ್ ಇನ್ನೂ ಪ್ರಬಲ ರಾಜಕೀಯ ಶಕ್ತಿಯಾಗುತ್ತಿದೆ..’ ಎಂದು ಟ್ವೀಟ್ ಮಾಡಿಕೊಂಡಿದ್ದಾರೆ. ಬಿಜೆಪಿಯ ಪ್ರಭಾವಿ ನಾಯಕರಾಗಿದ್ದ ಅನಂತಕುಮಾರ್ರ ಮಗಳು ಜೆಡಿಎಸ್ ಪರ ಬ್ಯಾಟಿಂಗ್ ಮಾಡಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.
2019ರ ಲೋಕಸಭಾ ಚುನಾವಣೆಯಲ್ಲಿ ಅನಂತಕುಮಾರ್ರ ಪತ್ನಿ ತೇಜಸ್ವಿನಿ ಅನಂತಕುಮಾರ್ ಅವರಿಗೆ ಟಿಕೆಟ್ ನೀಡಲಾಗುತ್ತೆ ಎಂದೇ ನಿರೀಕ್ಷಿಸಲಾಗಿತ್ತು. ಅಂತಿಮ ಕ್ಷಣದಲ್ಲಿ ಬಿ ಫಾರಂ ಸೇರಿದ್ದು ತೇಜಸ್ವಿ ಸೂರ್ಯ ಕೈಗೆ. ತಂದೆ ನಿಧನದ ಬಳಿಕ ಬಿಜೆಪಿ, ತಮ್ಮ ಕುಟುಂಬದವರನ್ನು ಕಡೆಗಣಿಸುತ್ತಿದೆ ಎಂಬುದಕ್ಕೆ ಪುಷ್ಟಿ ನೀಡುತ್ತಿದೆ ವಿಜೇತಾ ಅವರ ಈ ಟ್ವೀಟ್.

- Advertisement -

Latest News

error: Content is protected !!