ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಮೋರ್ಗನ್ಸ್ ಗೇಟ್ ನ ಪಾಲೆಮಾರ್ ಗಾರ್ಡನ್‍ನಲ್ಲಿ ನಡೆದ ವಿಕಸಿತ ಭಾರತ ಸಂಕಲ್ಪ ಸಮಾವೇಶ ನಡೆಯಿತು. ಬಿಜೆಪಿ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ಸಮಾವೇಶದಲ್ಲಿ ಭಾಗವಹಿಸಿದ್ದರು.
ಸಮಾವೇಶದಲ್ಲಿ ಯೋಧರು, ನಿವೃತ್ತಿಯ ನಂತರವೂ ಸಮಾಜ ಮತ್ತು ಪಕ್ಷಕ್ಕಾಗಿ ಶ್ರಮಿಸಿದ ಹಿರಿಯರು, ಸ್ಮಶಾನ ಸೇವಕರು, ಪೌರ ಕಾರ್ಮಿಕರು, ಕ್ರೀಡಾಪಟುಗಳು, ಮೀನುಗಾರರು, ತಾರಸಿ ಕೃಷಿ ಹಾಗೂ ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಹಲವಾರು ಗಣ್ಯರನ್ನು ಡಾ. ರಾಧಾಮೋಹನ್ ದಾಸ್ ಅಗರ್ ವಾಲ್ ಸನ್ಮಾನಿಸಿದರು.
ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ, ಮಾಜಿ ಸಚಿವ ಜೆ. ಕೃಷ್ಣ ಪಾಲೇಮಾರ್, ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ರಾಜೇಶ್ ನಾಯಕ್, ಉಮಾನಾಥ ಕೋಟ್ಯಾನ್, ಹರೀಶ್ ಪೂಂಜ, ಭಾಗೀರಥಿ ಮುರುಳ್ಯ, ವಿಧಾನಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು, ಪ್ರತಾಪಸಿಂಹ ನಾಯಕ್, ಮಾಜಿ ಸಚಿವ ಎಸ್.ಅಂಗಾರ, ವಿಧಾನಪರಿಷತ್ ಮಾಜಿ ಸದಸ್ಯರಾದ ಬಾಲಕೃಷ್ಣ ಭಟ್, ಮೋನಪ್ಪ ಭಂಡಾರಿ ಸಮಾವೇಶದಲ್ಲಿ ಉಪಸ್ಥಿತರಿದ್ದರು.
ಇಂದು ಬೆಳಿಗ್ಗೆ ಶಾಸಕ ವೇದವ್ಯಾಸ ಕಾಮತ್ ಅವರ ನಿವಾಸದಲ್ಲಿ ನಡೆದ ಉಪಹಾರ ಕೂಟದಲ್ಲಿ ದ.ಕ. ಜಿಲ್ಲೆಯ ಬಿಜೆಪಿ ಶಾಸಕರೊಂದಿಗೆ ಡಾ. ರಾಧಾಮೋಹನ್ ದಾಸ್ ಅಗರ್ ವಾಲ್ ಅವರು ಭಾಗವಹಿಸಿದ್ದರು.


