Monday, May 6, 2024
Homeಕರಾವಳಿಮಂಗಳೂರು; ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್ ಗಳನ್ನು ಹಾಕಿದವರ ವಿರುದ್ಧ ಕ್ರಮ; ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...

ಮಂಗಳೂರು; ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್ ಗಳನ್ನು ಹಾಕಿದವರ ವಿರುದ್ಧ ಕ್ರಮ; ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಂ ಅಮ್ಟೆ ಎಚ್ಚರಿಕೆ

spot_img
- Advertisement -
- Advertisement -

ಮಂಗಳೂರು; ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್ ಗಳನ್ನು ಹಾಕಿದವರ ವಿರುದ್ಧ ಕ್ರಮಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಡಾ.ವಿಕ್ರಂ ಅಮ್ಟೆ ಎಚ್ಚರಿಕೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಬರವಣಿಗೆ, ಚಿತ್ರ, ಸುಳ್ಳು ಸುದ್ದಿ, ಮಾನಹಾನಿಕಾರಕ ಸುದ್ದಿ ಇತ್ಯಾದಿ ಪೋಸ್ಟ್‌ಗಳನ್ನು ಹಾಕುವ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾ ಪೊಲೀಸರು, ಪುತ್ತೂರು ಮತ್ತು ಬಂಟ್ವಾಳ ಪೊಲೀಸ್ ಕಚೇರಿಗಳಲ್ಲಿ ಸಾಮಾಜಿಕ ಜಾಲತಾಣ ನಿಗಾ ಘಟಕವು ವಿಶೇಷವಾಗಿ ಗಮನಹರಿಸುತ್ತಿದೆ ಎಂದು ಎಸ್ಪಿ ಹೇಳಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಚುನಾವಣ ನೀತಿ ಸಂಹಿತೆ ಉಲ್ಲಂಘನೆಯಾಗುವಂತಹ ಪೋಸ್ಟ್‌ಗಳನ್ನು ಹಾಕುವುದು ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧ.ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಹರಡುವ ಸುದ್ದಿ, ಸುಳ್ಳು ಸುದ್ದಿ, ಅಶ್ಲೀಲ-ಅಸಭ್ಯ ವಿಷಯಗಳನ್ನು ಒಳಗೊಂಡು ಪೋಸ್ಟ್ ಹಾಕುವುದು ಕೂಡಾ ಶಿಕ್ಷಾರ್ಹ ಅಪರಾಧವಾಗಿರುತ್ತದೆ ಎಂದು ಎಸ್ಪಿ ಹೇಳಿದ್ದಾರೆ.

ಯಾವುದೇ ವ್ಯಕ್ತಿಯ ಚಾರಿತ್ರ್ಯಹರಣ, ಮಾನಹಾನಿ ಮಾಡುವಂತಹ ಪೋಸ್ಟ್‌ಗಳನ್ನು ಹಾಕುವುದು ಕೂಡ ಅಪರಾಧವಾಗಿದೆ. ಇಂತಹ ಪೋಸ್ಟ್‌ಗಳ ಮೇಲೆ ಜಿಲ್ಲಾ ಪೊಲೀಸರು ನಿಗಾ ವಹಿಸುತ್ತಿದ್ದಾರೆ ಎಂದು ಎಸ್ಪಿ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!