Thursday, June 4, 2026
Homeಕರಾವಳಿಉಡುಪಿವಿಕ್ರಂ ಗೌಡ ಎನ್ ಕೌಂಟರ್ ನಕಲಿ ಅಲ್ಲ, ನ್ಯಾಯಾಂಗ ತನಿಖೆ ಅವಶ್ಯಕತೆ ಇಲ್ಲ; ಉಡುಪಿ ಜಿಲ್ಲಾ...

ವಿಕ್ರಂ ಗೌಡ ಎನ್ ಕೌಂಟರ್ ನಕಲಿ ಅಲ್ಲ, ನ್ಯಾಯಾಂಗ ತನಿಖೆ ಅವಶ್ಯಕತೆ ಇಲ್ಲ; ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ

- Advertisement -
- Advertisement -

ಉಡುಪಿ: ನಕ್ಸಲ್ ವಿಕ್ರಂ ಗೌಡ ಎನ್‌ಕೌಂಟರ್ ನಕಲಿ ಅಲ್ಲ, ಎನ್‌ಕೌಂಟರ್ ನಕಲಿ ಎಂಬ ಅನುಮಾನ ಪಡುವುದು ಬೇಡ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.

ಉಡುಪಿಯಲ್ಲಿ ಇಂದು ಹೇಳಿಕೆ ನೀಡಿದ ಸಚಿವೆ ಹೆಬ್ಬಾಳ್ಕರ್, ಎನ್ ಕೌಂಟರ್ ಕುರಿತು ನ್ಯಾಯಾಂಗ ತನಿಖೆಯ ಅವಶ್ಯಕತೆ ಇಲ್ಲ. ಅಗತ್ಯವಿದ್ದರೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಕಾನೂನು ಪ್ರಕಾರ ಕಾನೂನು ಚೌಕಟ್ಟಿನಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ವಿಕ್ರಮ್ ಗೌಡ ವಿರುದ್ಧ ಹಲವು ಪ್ರಕರಣಗಳು ಇದ್ದವು. ಕೂಂಬಿಂಗ್ ಮಾಡುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ವಿಕ್ರಂ ಗೌಡ ಬಳಿ ಕೂಡಾ ಶಸ್ತ್ರಾಸ್ತ್ರಗಳು ಇದ್ದವು. ವಿಕ್ರಂ ಗೌಡ ಒಂದು ಬಾರಿ ಫೈರಿಂಗ್ ಮಾಡಿದ್ದರಿಂದ ಪ್ರತಿ ದಾಳಿ ಮಾಡದಿದ್ದರೆ ಪೊಲೀಸರ ಜೀವಕ್ಕೆ ಹಾನಿ ಆಗುತ್ತಿತ್ತು ಎಂದೂ ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದ್ದಾರೆ.

ನಕ್ಸಲಿಸಂ ಅನ್ನು ಬೇರು ಸಮೇತ ಕಿತ್ತು ಹಾಕಬೇಕು ಎಂಬುದು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಿಲುವು. ಪರ ವಿರೋಧ ಚರ್ಚೆ ಎಲ್ಲಾ ಸಂದರ್ಭದಲ್ಲಿ ಇರುತ್ತದೆ. ಸರ್ಕಾರ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿದೆ. ಸಂಶಯ ಇದ್ದವರಿಗೆ ನಾವು ಮತ್ತೆ ಸ್ಪಷ್ಟನೆ ಕೊಡಲು ತಯಾರಿದ್ದೇವೆ ಎಂದೂ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

- Advertisement -

Latest News

error: Content is protected !!