- Advertisement -
- Advertisement -
ಬೆಂಗಳೂರು: ಕೋರೋನಾ ಸೋಂಕು ಹರಡುವುದನ್ನು ತಡೆಯಲು ಲಾಕ್ ಡೌನ್ ಜಾರಿಗೊಳಿಸಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಮುಂದೂಡಲಾಗಿದೆ.
ಕೊರೋನಾ ಸಮಸ್ಯೆ ಮುಗಿದ ನಂತರ ಪಂಚಾಯತ್ ರಾಜ್ ತಿದ್ದುಪಡಿ ಕಾಯ್ದೆಯ ಅನ್ವಯ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.
ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕದ ಕುರಿತು ಸರ್ಕಾರದ ಸುಗ್ರೀವಾಜ್ಞೆ ಹೊರಡಿಸಲಾಗಿದೆ. ಇದಕ್ಕೆ ರಾಜ್ಯಪಾಲರ ಒಪ್ಪಿಗೆ ಕೂಡ ಸಿಕ್ಕಿದೆ ಎಂದು ಹೇಳಿದ್ದಾರೆ. ಕೋರೋನಾ ಸಮಸ್ಯೆ ಮುಗಿದ ನಂತರ ಪಂಚಾಯತ್ ರಾಜ್ ತಿದ್ದುಪಡಿ ಹೊಸ ಕಾಯ್ದೆಯ ಅನ್ವಯ ಚುನಾವಣೆ ನಡೆಸಲಾಗುವುದು. ರಾಜ್ಯ ಚುನಾವಣಾ ಆಯೋಗಕ್ಕೆ ಈ ಕುರಿತಾಗಿ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
- Advertisement -