Thursday, June 4, 2026
Homeಕರಾವಳಿಉಡುಪಿಬೈಂದೂರು : ಹೂಳೆತ್ತುವ ಕಾಮಗಾರಿ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ: ಗುತ್ತಿಗೆದಾರರು, ಗ್ರಾಮಸ್ಥರ ನಡುವೆ ಮಾತಿನ ಚಕಮಕಿ

ಬೈಂದೂರು : ಹೂಳೆತ್ತುವ ಕಾಮಗಾರಿ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ: ಗುತ್ತಿಗೆದಾರರು, ಗ್ರಾಮಸ್ಥರ ನಡುವೆ ಮಾತಿನ ಚಕಮಕಿ

- Advertisement -
- Advertisement -

ಬೈಂದೂರು: ಇಲ್ಲಿನ ತ್ರಾಸಿ ಗ್ರಾಮದ ಸೌಪರ್ಣಿಕಾ ನದಿ ಯಾಂತ್ರಿಕೃತ ಹೂಳೆತ್ತುವ ಕಾಮಗಾರಿ ಮತ್ತೆ ಪುನರಾರಂಭಗೊಂಡಿದ್ದು, ಕಾಮಗಾರಿ ನಿಲ್ಲಿಸುವಂತೆ ಆಗ್ರಹಿಸಿ ತ್ರಾಸಿ, ಮೊವಾಡಿ, ಹೊಸಾಡು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಈ ಸಂದರ್ಭ ಗುತ್ತಿಗೆದಾರರು ಹಾಗೂ ಸಾರ್ವಜನಿಕರ ನಡುವೆ ಮಾತಿನ ಚಕಮಕಿ ನಡೆದು ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು. ಕೂಡಲೇ ಸ್ಥಳಕ್ಕೆ ಆಗಮಿಸಿದ ಗಂಗೊಳ್ಳಿ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದರು.

ಘಟನಾ ಸ್ಥಳಕ್ಕೆ ಬೈಂದೂರು ಶಾಸಕ ಆಗಮಿಸಿ ಕಾಮಗಾರಿ ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ರು. ಈ ಸಂದರ್ಭದಲ್ಲಿ ಗಣಿ ಇಲಾಖೆ ಅಧಿಕಾರಿ, ಬಿಜೆಪಿ ಬೈಂದೂರು ಮಂಡಲ ಮಾಜಿ ಅಧ್ಯಕ್ಷ ಪ್ರಣಯ್ ಕುಮಾರ್ ಶೆಟ್ಟಿ, ತಾ.ಪಂಚಾಯತ್ ಮಾಜಿ ಉಪಾಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ, ಶ್ರೀಧರ್ ಬಡಾಕೆರೆ ಮತ್ತಿತರರು ಉಪಸ್ಥಿತರಿದ್ದರು.

- Advertisement -

Latest News

error: Content is protected !!