- Advertisement -
- Advertisement -
ಚಿಕ್ಕಮಗಳೂರು: ಕರೊನಾ ವೈರಸ್ ಆತಂಕ ದಿನೇದಿನೆ ಹೆಚ್ಚುತ್ತಿದೆ. ಈ ನಡುವೆ ಚಿಕ್ಕಮಗಳೂರಿನ ಕೊಪ್ಪದ ಗೌರಿಗದ್ದೆ ಆಶ್ರಮದ ಅವಧೂತ ವಿನಯ್ ಗುರೂಜಿ ಅವರು ಸಮಾಧಾನಕರ ವಿಷಯವೊಂದನ್ನು ಹೇಳಿದ್ದಾರೆ.
ಕರೊನಾ ಸೋಂಕಿನ ಪ್ರಮಾಣ ಮೇ 15ರ ನಂತರ ಕಡಿಮೆಯಾಗಲಿದೆ. ಹಾಗಾಗಿ ಹೆದರಬೇಕಾಗಿಲ್ಲ. ಆದರೆ ದೇಶದ ಆರ್ಥಿಕತೆ ಸುಧಾರಿಸಲು ಇನ್ನೂ ಎರಡು ವರ್ಷ ಬೇಕಾಗಬಹುದು. ಅದಕ್ಕೆ ನಾವು ಸಿದ್ಧರಾಗಬೇಕು ಎಂದು ಹೇಳಿದ್ದಾರೆ.
ನಾವು ಇನ್ನೂ ಎರಡು ವರ್ಷ ಆದಷ್ಟು ಸರಳ ಜೀವನ ನಡೆಸಬೇಕು. ಬಡವರಿಗೆ ಶ್ರೀಮಂತರು ಸಹಾಯ ಮಾಡಬೇಕು. ಪ್ರವಾಸ, ಶಾಪಿಂಗ್ ಎಂದು ವೃಥಾ ಖರ್ಚು ಮಾಡುವ ಬದಲು ಅಗತ್ಯವಿರುವ ಧಾನ್ಯವನ್ನು ಸಂಗ್ರಹಿಸಿಕೊಳ್ಳೋಣ. ಎಲ್ಲವನ್ನೂ ಸರ್ಕಾರವೇ ಮಾಡಲಿ ಎಂದು ಕುಳಿತುಕೊಳ್ಳಬಾರದು. ನಮ್ಮ ಕೈಲಾದಷ್ಟು ಸಹಾಯವನ್ನು ಬಡವರಿಗೆ ಮಾಡಬೇಕು ಎಂದು ವಿನಯ್ ಗುರೂಜಿ ಹೇಳಿದ್ದಾರೆ.
- Advertisement -