Wednesday, November 25, 2026
Homeತಾಜಾ ಸುದ್ದಿಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಜೈಲೇ ಗತಿ: ಹೈಕೋರ್ಟ್ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಜೈಲೇ ಗತಿ: ಹೈಕೋರ್ಟ್ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ನವದೆಹಲಿ: ಧಾರವಾಡ ಜಿ.ಪಂ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ್ದ ಜಾಮೀನಿನ ಮೇಲೆ ಹೊರಬಂದಿದ್ದ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ ನೀಡಿದೆ. ಹೈಕೋರ್ಟ್ ಆದೇಶವನ್ನು ರದ್ದುಪಡಿಸಿರುವ ನ್ಯಾ. ಪ್ರಶಾಂತ್ ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠ, ಎರಡು ವಾರಗಳಲ್ಲಿ ಸೆಷನ್ಸ್ ನ್ಯಾಯಾಲಯಕ್ಕೆ ಶರಣಾಗುವಂತೆ ಸೂಚಿಸಿದೆ.

ಈ ಪ್ರಕರಣದಲ್ಲಿ 2026ರ ಏಪ್ರಿಲ್ 17ರಂದು ವಿಚಾರಣಾ ನ್ಯಾಯಾಲಯ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್, ಜುಲೈ 31ರಂದು ಶಿಕ್ಷೆಗೆ ತಡೆ ನೀಡಿ ಜಾಮೀನು ಮಂಜೂರು ಮಾಡಿತ್ತು. ಹೈಕೋರ್ಟ್‌ನ ಈ ಆದೇಶವನ್ನು ಪ್ರಶ್ನಿಸಿ ಸಿಬಿಐ ಹಾಗೂ ಯೋಗೇಶ್ ಗೌಡ ಸಹೋದರ ಗುರುನಾಥಗೌಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶವನ್ನು ವಜಾಗೊಳಿಸಿದ್ದು, ಶಾಸಕರಿಗೆ ಮತ್ತೆ ಜೈಲುವಾಸ ಅನಿವಾರ್ಯವಾಗಿದೆ.

- Advertisement -

Latest News

error: Content is protected !!