- Advertisement -
- Advertisement -
ಉಡುಪಿ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರವಾಗಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ ಕುಮಾರ್ ಸೊರಕೆ ಬೈಂದೂರಿನಲ್ಲಿ ಪ್ರಚಾರ ನಡೆಸಿದರು.
ಬೈಂದೂರು ವಿಧಾನಸಭಾ ಕ್ಷೇತ್ರದ ಶಿರೂರಿನ ವಿವಿಧೆಡೆ ಮನೆಗಳಿಗೆ ಭೇಟಿ ಸೇರಿದಂತೆ ವಿನಯ ಕುಮಾರ್ ಸೊರಕೆ ಮತ ಪ್ರಚಾರ ನಡೆಸಿದರು.ನಂತರ ಬೈಂದೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ವಿನಯ ಕುಮಾರ್ ಸೊರಕೆ ಸುದ್ದಿಗೋಷ್ಠಿಯನ್ನೂ ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಿ.ಎ. ಬಾವ, ಕಾಂಗ್ರೆಸ್ ಪಕ್ಷದ ಮುಖಂಡರಾದ ಡಿ.ಆರ್. ರಾಜು, ರಾಜು ಪೂಜಾರಿ, ರೋಷನ್ ಶೆಟ್ಟಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ರಾಜ್ಯದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಸೋಮವಾರ ಮತದಾನ ನಡೆಯಲಿದ್ದು, ಇಂದು ಸಂಜೆ 6 ಗಂಟೆಗೆ ಬಹಿರಂಗ ಚುನಾವಣಾ ಪ್ರಚಾರ ಅಂತ್ಯಗೊಳ್ಳುತ್ತಿದೆ.
- Advertisement -