Friday, June 5, 2026
Homeತಾಜಾ ಸುದ್ದಿಹಿರಿಯ ನಟಿ ವಿನಯಾ ಪ್ರಸಾದ್ ಮನೆಯಲ್ಲಿ ಕಳ್ಳತನಪ್ರಕರಣ: ಆರೋಪಿಗಳನ್ನು ಬಂಧಿಸಿದ ಪೊಲೀಸರು

ಹಿರಿಯ ನಟಿ ವಿನಯಾ ಪ್ರಸಾದ್ ಮನೆಯಲ್ಲಿ ಕಳ್ಳತನಪ್ರಕರಣ: ಆರೋಪಿಗಳನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಬೆಂಗಳೂರು : ಹಿರಿಯ ನಟಿ ವಿನಯಾ ಪ್ರಸಾದ್ ಅವರ ಮನೆಯಲ್ಲಿ ಕಳ್ಳತನ ಮಾಡಿದ ಇಬ್ಬರು ಆರೋಪಿಗಳನ್ನು ನಂದಿನಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಯ್ಯಪ್ಪ ಅಲಿಯಾಸ್ ಮುರುಗ (36) ಹಾಗೂ ರವಿ ( 26) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ 13.53 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 261 ಗ್ರಾಂ ಚಿನ್ನಾಭರಣ ಹಾಗೂ 500 ಗ್ರಾಂ ಬೆಳ್ಳಿ ಸಾಮಗ್ರಿ ಜಪ್ತಿ ಮಾಡಲಾಗಿದೆ. ಇವರಿಬ್ಬರು ಠಾಣೆಯ ವ್ಯಾಪ್ತಿಯ 5 ಕಡೆ ಕಳ್ಳತನ ಎಸಗಿದ್ದರು ಎಂದು ತಿಳಿಸಿದ್ದಾರೆ.

ಬೆಂಗಳೂರಿನ ನಂದಿನಿ ಲೇಔಟ್ 4 ನೇ ಬ್ಲಾಕ್ ನ ರೈಲ್ವೆ ಮೈನ್ಸ್ ಕಾಲೋನಿ ನಿವಾಸದಲ್ಲಿ ದುಷ್ಕರ್ಮಿಗಳು ಕಳ್ಳತನ ಮಾಡಿದ್ದು, ಈ ಸಂಬಂಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ದುಷ್ಕರ್ಮಿಗಳ ಪತ್ತೆ ಶೋಧ ಕಾರ್ಯ ನಡೆಸಿದ್ದರು.

ನಟಿ ವಿನಯಾ ಪ್ರಸಾದ್ ಹಾಗೂ ಅವರ ಪತಿ ಜ್ಯೋತಿ ಪ್ರಕಾಶ್ ಅವರು ಮನೆಗೆ ಬೀಗ ಹಾಕಿಕೊಂಡು ಕಾರ್ಯ ನಿಮಿತ್ತ ಅ.22 ರಂದು ಉಡುಪಿಗೆ ತೆರಳಿದ್ದರು. ಈ ವೇಳೆ ದುಷ್ಕರ್ಮಿಗಳು ಮನೆಯ ಬಾಗಿಲ ಬೀಗವನ್ನು ಮುರಿದು ಮನೆ ಪ್ರವೇಶಿಸಿ 7 ಸಾವಿರ ರೂ. ನಗದು ಹಣ ದೋಚಿ ಪರಾರಿಯಾಗಿದ್ದರು.

- Advertisement -

Latest News

error: Content is protected !!