Thursday, June 4, 2026
Homeತಾಜಾ ಸುದ್ದಿಮಾಜಿ ಸಚಿವ ವಿನಯ ಕುಮಾರ್ ಸೊರಕೆ ತಾಯಿ ನಿಧನ

ಮಾಜಿ ಸಚಿವ ವಿನಯ ಕುಮಾರ್ ಸೊರಕೆ ತಾಯಿ ನಿಧನ

- Advertisement -
- Advertisement -

ಪುತ್ತೂರು; ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅವರ ತಾಯಿ ಸುನೀತಿ(92) ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು,

ಅನಾರೋಗ್ಯದ ಹಿನ್ನೆಲೆ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಶನಿವಾರ ನಿಧನರಾಗಿದ್ದಾರೆ. ಮೃತರು ಪುತ್ರರಾದ ಕೃಷಿಕ ಅಶೋಕ್ ಕುಮಾರ್ ಸೊರಕೆ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮುಂಡೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸುರೇಶ್ ಕುಮಾರ್ ಸೊರಕೆ, ಪುತ್ರಿ ಶಶಿಕಲಾ ಶರತ್ ಮತ್ತು ಎಂಟು ಮೊಮ್ಮಕ್ಕಳು ಹಾಗೂ ಮೂವರು ಮರಿ ಮಕ್ಕಳನ್ನು ಅಗಲಿದ್ದಾರೆ.


ಅಂತ್ಯ ಸಂಸ್ಕಾರ ಇಂದು ಅವರ ಸ್ವಗೃಹವಾದ ಪುತ್ತೂರು ತಾಲೂಕಿನ ಸರ್ವೇ ಗ್ರಾಮದ ಸೊರಕೆ ಯಲ್ಲಿ ನಡೆಯಲಿದೆ ಎನ್ನಲಾಗಿದೆ.

- Advertisement -

Latest News

error: Content is protected !!