Saturday, May 18, 2024
Homeಕರಾವಳಿಉಡುಪಿಕೊರೊನಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಉಡುಪಿಯಲ್ಲಿ ಪಾದಯಾತ್ರೆ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಸಹಿತ...

ಕೊರೊನಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಉಡುಪಿಯಲ್ಲಿ ಪಾದಯಾತ್ರೆ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಸಹಿತ 22 ಕಾಂಗ್ರೆಸ್ ಮುಖಂಡರ ವಿರುದ್ಧ ಕೇಸ್ ದಾಖಲು

spot_img
- Advertisement -
- Advertisement -

ಉಡುಪಿ: ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಸಹಿತ 22 ಕಾಂಗ್ರೆಸ್ ಮುಖಂಡರ ವಿರುದ್ಧ ಕೊರೊನಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಪ್ರತಿಭಟನೆಯನ್ನು ನಡೆಸಿದ ಕಾರಣಕ್ಕೆ ಇದೀಗ ದೂರು ದಾಖಲಾಗಿದೆ.

ಕೋಟದಲ್ಲಿ ಕೊರಗ ಸಮುದಾಯದವರ ಮೇಲೆ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ ಜನವರಿ 12 ರಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ಕಾಂಗ್ರೇಸ್ ಕಾರ್ಯಕರ್ತರು ಮಣಿಪಾಲದಲ್ಲಿ ಜಿಲ್ಲಾಧಿಕಾರಿ ಕಚೇರಿಯವರೆಗೆ ಪಾದಯಾತ್ರೆಯನ್ನು ನಡೆಸಿ ಪ್ರತಿಭಟನೆಯನ್ನು ನಡೆಸಿದ್ದರು.

ಈ ಪಾದಯಾತ್ರೆಗೆ ಕಾಂಗ್ರೇಸ್ ಮುಖಂಡರು ಸಕ್ಷಮ ಪ್ರಾಧಿಕಾರದಿಂದ ಯಾವುದೇ ಅನುಮತಿಯನ್ನು ಪಡೆದುಕೊಂಡಿರಲಿಲ್ಲ,ಜೊತೆಗೆ ಕೊರೊನಾ ಆದೇಶವನ್ನು ಉಲ್ಲಂಘಿಸಿ, ಸುರಕ್ಷಿತ ಅಂತರ ಕಾಯ್ದುಕೊಳ್ಳದೆ ಪ್ರತಿಭಟನಾ ಮೆರವಣಿಗೆ ನಡೆಸಿದ್ದರು, ಕೋವಿಡ್ ನಿಯಮಾವಳಿ ಉಲ್ಲಂಘಿಸಿ ಗುಂಪುಗೂಡಿ ಭಾಷಣ ನಡೆಸಿದ್ದರು ಎಂದು ದೂರಿನಲ್ಲಿ ದಾಖಲಾಗಿದೆ.

ಮಣಿಪಾಲ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿ ಯಶವಂತ್ ಪ್ರಭು ಎಂಬವರು ದೂರನ್ನು ದಾಖಲಿಸಿದ್ದರು. ಈ ಹಿನ್ನಲೆಯಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಸೇರಿದಂತೆ 22 ಮಂದಿ ಕಾಂಗ್ರೇಸ್ ಮುಖಂಡರ ಮೇಲೆ ಇದೀಗ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!