Thursday, May 16, 2024
Homeತಾಜಾ ಸುದ್ದಿಗಂಡು ಮಗುವಿನ ತಂದೆಯಾದ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ

ಗಂಡು ಮಗುವಿನ ತಂದೆಯಾದ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ

spot_img
- Advertisement -
- Advertisement -

ನವದೆಹಲಿ : ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ತಮ್ಮ ಎರಡನೇ ಗಂಡು ಮಗುವನ್ನು ಬರಮಾಡಿಕೊಂಡಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಖುಷಿ ಹಂಚಿಕೊಂಡಿದ್ದಾರೆ.

” ಫೆಬ್ರವರಿ 15ರಂದು ನಾವು ನಮ್ಮ ಗಂಡು ಮಗುವನ್ನ ಸ್ವಾಗತಿಸಿದ್ದೇವೆ ಎಂದು ಎಲ್ಲರಿಗೂ ತಿಳಿಸಲು ನಾವು ಸಂತೋಷಪಡುತ್ತೇವೆ.ವಾಮಿಕಾಳ ಪುಟ್ಟ ಸಹೋದರ ಈ ಲೋಕಕ್ಕೆ ಬಂದಿದ್ದಾನೆ” ಎಂದು ನಟಿ ಅನುಷ್ಕಾ ಶರ್ಮಾ ಹೇಳಿದ್ದಾರೆ. ಅಲ್ಲದೇ ಮಗುವಿನ ಹೆಸರನ್ನ ಅಕಾಯ್ ಎಂದು ಬಹಿರಂಗಪಡಿಸಿದ್ದಾರೆ.

“ನಮ್ಮ ಜೀವನದ ಈ ಸುಂದರ ಸಮಯದಲ್ಲಿ ನಾವು ನಿಮ್ಮ ಆಶೀರ್ವಾದ ಮತ್ತು ಶುಭ ಹಾರೈಕೆಗಳನ್ನು ಕೋರುತ್ತೇವೆ. ಈ ಸಮಯದಲ್ಲಿ ದಯವಿಟ್ಟು ನಮ್ಮ ಗೌಪ್ಯತೆಯನ್ನ ಗೌರವಿಸಬೇಕೆಂದು ನಾವು ವಿನಂತಿಸುತ್ತೇವೆ” ಎಂದಿದ್ದಾರೆ.

- Advertisement -
spot_img

Latest News

error: Content is protected !!