Saturday, April 20, 2024
Homeತಾಜಾ ಸುದ್ದಿಆಸ್ಟ್ರೇಲಿಯಾ ಟೆಸ್ಟ್ ಸರಣಿ ಪೈಕಿ ಕೇವಲ ಒಂದು ಪಂದ್ಯಕ್ಕೆ ಲಭ್ಯವಾಗಲಿರುವ ಕೊಹ್ಲಿ -ಪಿತೃತ್ವ ರಜೆ ಪಡೆದ...

ಆಸ್ಟ್ರೇಲಿಯಾ ಟೆಸ್ಟ್ ಸರಣಿ ಪೈಕಿ ಕೇವಲ ಒಂದು ಪಂದ್ಯಕ್ಕೆ ಲಭ್ಯವಾಗಲಿರುವ ಕೊಹ್ಲಿ -ಪಿತೃತ್ವ ರಜೆ ಪಡೆದ ವಿರಾಟ್!..

spot_img
- Advertisement -
- Advertisement -

ನವದೆಹಲಿ: ಈ ಬಾರಿ 13ನೇ ಆವೃತ್ತಿಯ ಐಪಿಎಲ್ ಟೂರ್ನಿ ಮುಕ್ತಾಯವಾಗುತ್ತಿದ್ದಂತೆಯೇ ಟೀಂ ಇಂಡಿಯಾ ಮೂರು ತಿಂಗಳ ದೀರ್ಘಕಾಲಿಕ ಆಸ್ಟ್ರೇಲಿಯಾ ಪ್ರವಾಸವನ್ನು ಆರಂಭಿಸಲಿದೆ. ಆದರೆ ಈ ಬಾರಿಯ ಆಸ್ಟ್ರೇಲಿಯಾ ಪ್ರವಾಸದಲ್ಲಿ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಡಿಸೆಂಬರ್ 17ರಿಂದ ಅಡಿಲೇಡ್‌ನಲ್ಲಿ ಆರಂಭವಾಗಲಿರುವ ಮೊದಲ ಟೆಸ್ಟ್ ಪಂದ್ಯದ ಬಳಿಕ ತವರಿಗೆ ಮರಳಲಿದ್ದಾರೆ.

2021ರ ಆರಂಭದಲ್ಲಿ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಕಾರಣಕ್ಕೆ ವಿರಾಟ್‌ಗೆ ಬಿಸಿಸಿಐ ಪಿತೃತ್ವ ರಜೆ ನೀಡಿದೆ. ಹೀಗಾಗಿ 4 ಪಂದ್ಯಗಳ ಟೆಸ್ಟ್ ಸರಣಿ ಪೈಕಿ ಕೊಹ್ಲಿ ಕೇವಲ ಒಂದು ಪಂದ್ಯವನ್ನಾಡಲಿದ್ದು, ಇನ್ನುಳಿದ ಮೂರು ಟೆಸ್ಟ್‌ ಪಂದ್ಯಗಳಿಂದ ವಂಚಿತರಾಗಲಿದ್ದಾರೆ.

- Advertisement -
spot_img

Latest News

error: Content is protected !!