Friday, May 17, 2024
Homeತಾಜಾ ಸುದ್ದಿವಿಶಾಖಪಟ್ಟಣಂ ಅನಿಲ ದುರಂತದಲ್ಲಿ ಮೃತಪಟ್ಟವರಿಗೆ ತಲಾ 1 ಕೋಟಿ. ರೂ. ಪರಿಹಾರ ಘೋಷಣೆ..!

ವಿಶಾಖಪಟ್ಟಣಂ ಅನಿಲ ದುರಂತದಲ್ಲಿ ಮೃತಪಟ್ಟವರಿಗೆ ತಲಾ 1 ಕೋಟಿ. ರೂ. ಪರಿಹಾರ ಘೋಷಣೆ..!

spot_img
- Advertisement -
- Advertisement -

ವಿಶಾಖ ಪಟ್ಟಣ : ವಿಶಾಖ ಪಟ್ಟಣಂನ ಗೋಪಾಲಪಟ್ಟಣದ ನಾಯ್ಡು ತೋಟಾ ಸಮೀಪದಲ್ಲಿನ ಆರ್ ಆರ್ ವೆಂಕಟಪುರಂನಲ್ಲಿರುವ ಎಲ್ ಜಿ ಪಾಲಿಮರ್ಸ್ ಇಂಡಸ್ಟ್ರೀಯಲ್ಲಿ ಇಂದು ಮುಂಜಾನೆ ಸುಮಾರು 3 ಗಂಟೆಗೆ ವಿಷಾನಿಲ ಸೋರಿಕೆಯಾದ ಪರಿಣಾಮ, 13 ಜನರು ಸಾವನ್ನಪ್ಪಿದ್ದರು. 300ಕ್ಕೆ ಹೆಚ್ಚು ಜನರು ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದರು. ಇದೀಗ ಆಂಧ್ರಪ್ರದೇಶ ಸರ್ಕಾರ ಮೃತರಿಗೆ 1 ಕೋಟಿ, ತೀವ್ರವಾಗಿ ಅಸ್ವಸ್ಥಗೊಂಡವರಿಗೆ 10 ಲಕ್ಷ ಪರಿಹಾರವನ್ನು ಘೋಷಣೆ ಮಾಡಿದೆ.

ಈ ಕುರಿತಂತೆ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಆಂಧ್ರಪ್ರದೇಶ ಮುಖ್ಯಮಂತ್ರಿ ವೈಜಿ ಜಗಮೋಹನ್ ರೆಡ್ಡಿ, ಇದೊಂದು ಘೋರ ದುರಂತವಾಗಿದೆ. ರಾಜ್ಯ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಣಿಸಿದೆ. ಎಲ್ ಜಿ ಪಾಲಿಮರ್ಸ್ ಇಂಡಸ್ಟ್ರೀಸ್ ಸುತ್ತಮುತ್ತಲಿನ ಗ್ರಾಮಸ್ಥರನ್ನು ಸ್ಥಳಾಂತರಿಸಲಾಗಿದೆ. ರಕ್ಷಣಾ ಕಾರ್ಯ ಭರದಿಂದ ಸಾಗಿದೆ ಎಂದು ತಿಳಿಸಿದರು.

ಇನ್ನೂ ಮುಂದುವರೆದು, ಎಲ್ ಜಿ ಪಾಲಿಮರ್ಸ್ ಇಂಡಸ್ಟ್ರೀಸ್ ವಿಷಾನಿಲ ದುರಂತದಲ್ಲಿ ಇದುವರೆಗೆ 13 ಜನರು ಸಾವನ್ನಪ್ಪಿದ್ದಾರೆ. ನೂರಾರು ಜನರು ಅಸ್ವಸ್ಥರಾಗಿದ್ದಾರೆ. ವಿಷಾನಿಲ ಸೇವಿಸಿದ ಸಾವನ್ನಪ್ಪಿದವರ ಕುಟುಂಬಕ್ಕೆ 1 ಕೋಟಿ ಪರಿಹಾರವನ್ನು ನೀಡಲಾಗುತ್ತದೆ. ತೀವ್ರವಾಗಿ ಅಸ್ವಸ್ಥಗೊಂಡವರಿಗೆ 10 ಲಕ್ಷ ಪರಿಹಾರವನ್ನು ನೀಡಲಾಗುತ್ತದೆ ಎಂಬುದಾಗಿ ಪರಿಹಾರದ ಹಣವನ್ನು ಘೋಷಣೆ ಮಾಡಿದರು.

ಅಂದಹಾಗೇ, ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯಲ್ಲಿ ಭಾರಿ ವಿಷಾನಿಲ ದುರಂತವೊಂದು ಸಂಭವಿಸಿತ್ತು. ಇಂದು ಮುಂಜಾನೇ ವಿಷಾನಿಲ ಸೋರಿಕೆಯಾದ ಪರಿಣಾಮ, ಈಗಾಗಲೇ 12 ಜನರು ಜನರು ಸಾವನ್ನಪ್ಪಿದ್ದರು. ಇನ್ನೂ ವಿಷಾನಿಲ ಸೇವಿಸಿದಂತ 20ಕ್ಕೂ ಹೆಚ್ಚು ಜನರ ಆರೋಗ್ಯ ಗಂಭೀರವಾಗಿದ್ದರೇ, 80 ಜನರನ್ನು ವೆಂಟಿಲೇಟರ್ ನಲ್ಲಿ ಇರಿಸಿ, ಚಿಕಿತ್ಸೆ ನೀಡಲಾಗುತ್ತಿದೆ. 300ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದರು.

- Advertisement -
spot_img

Latest News

error: Content is protected !!