- Advertisement -
![]()
- Advertisement -
ಬೆಂಗಳೂರು: ದಿವಂಗತ ಚಲನಚಿತ್ರ ನಟ ಡಾ. ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣಕ್ಕೆ ಬೆಂಗಳೂರಿನಲ್ಲಿ ಜಮೀನು ಮೀಸಲಿಡುವಂತೆ ಇಂದು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಕೆಯಾಗಿದೆ.
ಸ್ಮಾರಕ ನಿರ್ಮಾಣಕ್ಕೆ ಹತ್ತು ಗುಂಟೆ ಜಮೀನು ಮೀಸಲಿಡುವಂತೆ ವಿಷ್ಣುವರ್ಧನ್ ಪತ್ನಿ ಭಾರತಿ ವಿಷ್ಣುವರ್ಧನ್ ಮತ್ತು ಅಳಿಯ ಅನಿರುದ್ ಸಿಎಂ ಅಧಿಕೃತ ನಿವಾಸದಲ್ಲಿ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.
ಮುಂಬರುವ ವಿಷ್ಣುವರ್ಧನ್ ಹುಟ್ಟು ಹಬ್ಬದ ಒಳಗೆ ಸರ್ಕಾರ ಭೂಮಿಗೆ ಅನುಮತಿಸಬೇಕು ಮತ್ತು ವಿಷ್ಣುವರ್ಧನ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಕೊಡಬೇಕು ಎಂದೂ ಮನವಿ ಮಾಡಿದ್ದಾರೆ.
ಕೆಲವು ದಿನಗಳ ಹಿಂದೆ ಅಭಿಮಾನ್ ಸ್ಟುಡಿಯೋದಲ್ಲಿದ್ದ ವಿಷ್ಣುವರ್ಧನ್ ಸಮಾಧಿಯನ್ನು ಧ್ವಂಸಗೊಳಿಸಲಾಗಿದ್ದು, ಬಳಿಕ ರಾಜ್ಯ ಸರ್ಕಾರ ಅಭಿಮಾನ್ ಸ್ಟುಡಿಯೋಗೆ ನೀಡಲಾಗಿದ್ದ ಭೂಮಿಯನ್ನು ಮರು ಸ್ವಾಧೀನಪಡಿಸಿಕೊಂಡಿತ್ತು.
- Advertisement -


