Tuesday, July 1, 2025
Homeಕರಾವಳಿಮಂಗಳೂರು: ದೇವಾಲಯಗಳ ತೆರವು ಖಂಡಿಸಿ ವಿಶ್ವ ಹಿಂದು ಪರಿಷತ್ ಪ್ರತಿಭಟನೆ!

ಮಂಗಳೂರು: ದೇವಾಲಯಗಳ ತೆರವು ಖಂಡಿಸಿ ವಿಶ್ವ ಹಿಂದು ಪರಿಷತ್ ಪ್ರತಿಭಟನೆ!

spot_img
- Advertisement -
- Advertisement -

ಮಂಗಳೂರು: ನಗರದ ಕದ್ರಿ ಮಲ್ಲಿಕಟ್ಟೆ ದ್ವಾರದ ಬಳಿ ದೇವಸ್ಥಾನಗಳನ್ನು ತೆರವುಗೊಳಿಸುವ ಸರಕಾರದ ನಡೆಯನ್ನು ಖಂಡಿಸಿ ವಿಶ್ವ ಹಿಂದು ಪರಿಷತ್ ಬಜರಂಗದಳ ಗುರುವಾರದಂದು ಪ್ರತಿಭಟನೆ ನಡೆಸಿತು

ಸರಕಾರ ದೇವಸ್ಥಾನಗಳನ್ನು ತೆರವುಗೊಳಿಸುವ ನಿರ್ಧಾರದಿಂದ ಹಿಂದೆ ಸರಿಯಬೇಕು.ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಆದಿಶಕ್ತಿ ಶ್ರೀ ಮಹದೇವಮ್ಮ ಭೈರವೇಶ್ವರ ಪುರಾತನ ದೇವಸ್ಥಾನವನ್ನು ಬಲವಂತದಿಂದ ಒಡೆದು ಹಾಕಿರುವ ಈ ಕೃತ್ಯವನ್ನು ಹಾಗು ರಾಜ್ಯದಾದ್ಯಂತ ದೇವಸ್ಥಾನಗಳನ್ನು ತೆರವುಗೊಳಿಸುವ ಸರ್ಕಾರದ ನಡೆಯನ್ನು ವಿಶ್ವ ಹಿಂದು ಪರಿಷತ್ ಬಜರಂಗದಳ ಖಂಡಿಸುತ್ತದೆ.

ಅಲ್ಲದೆ ಒಡೆದು ಹಾಕಿರುವ ದೇವಸ್ಥಾನವನ್ನು ಪುನರ್ನಿರ್ಮಾಣ ಮಾಡುವುದರ ಜೊತೆಗೆ ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ನಂಜನಗೂಡು ತಾಲ್ಲೂಕಿನ ತಹಸಿಲ್ದಾರರನ್ನು ಅಮಾನತುಗೊಳಿಸುವಂತೆ ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದೆ.

ಸಾರ್ವಜನಿಕ ಸ್ಥಳಗಳಲ್ಲಿ / ರಸ್ತೆಗಳಲ್ಲಿ ಅನಧಿಕೃತವಾಗಿ ನಿರ್ಮಿಸಲಾದ ಧಾರ್ಮಿಕ ಶ್ರದ್ಧಾ ಕೇಂದ್ರಗಳು ದೇವಸ್ಥಾನ, ಚರ್ಚ್, ಮಸೀದಿ, ಗುರುದ್ವಾರ ಇತ್ಯಾದಿಗಳನ್ನು ಸಕ್ರಮಗೊಳಿಸುವ, ಸ್ಥಳಾಂತರಿಸುವ, ಅನಿವಾರ್ಯವಿದ್ದಾಗ ಮಾತ್ರ ತೆರವುಗೊಳಿಸು ಆದೇಶವನ್ನು ವಿಶ್ವ ಹಿಂದು ಪರಿಷತ್ ಗೌರವಿಸುತ್ತದೆ.

ಆದರೆ ಸುಪ್ರೀಂ ಕೋರ್ಟ್ ನ ಆದೇಶವನ್ನು ಪಾಲಿಸುವಾಗ ರಾಜ್ಯ ಸರ್ಕಾರವು ಪ್ರತಿಯೊಂದು ಶ್ರದ್ಧಾ ಕೇಂದ್ರದ ಬಗ್ಗೆ ಪ್ರತ್ಯೇಕ ಪರಾಮರ್ಶೆ ಸ್ಕ್ರಮ, ಸ್ಥಳಾಂತರ, ಅನಿವಾರ್ಯವಿದ್ದಾಗ ಮಾತ್ರ ತೆರವು ಮಾಡಲು ಕ್ರಮ ಜರುಗಿಸಬೇಕೆಂದಿದೆ. ಹೀಗಾಗಿಯೂ ಸಹ ಮೈಸೂರಿನ ಜಿಲ್ಲಾಡಳಿತವು ಮೇಲ್ಕಂಡ ಯಾವುದೇ ಕ್ರಮ ತೆಗೆದುಕೊಳ್ಳದೆ ಹಿಂದು ದೇವಸ್ಥಾನವನ್ನು ಮಾತ್ರ ಕೆಡವಿರುವುದು ಖಂಡನೀಯ.

ಸುಪ್ರೀಂ ಕೋರ್ಟ್‌ನ ಆದೇಶದಂತೆ ಪ್ರತಿಯೊಂದು ದೇವಸ್ಥಾನಗಳಿಗೂ ಪ್ರತ್ಯೇಕ ನೋಟೀಸ್ ಜಾರಿ ಮಾಡಿ, ಉರ್ಜಿತಗೊಳಿಸಲು ಮತ್ತು ಸ್ಥಳಾಂತರಿಸಲು ಬೇಕಾದಂತಹ ಕ್ರಮ ಜರುಗಿಸಿ ದೇವಸ್ಥಾನಗಳನ್ನು ಉಳಿಸಿ ರಕ್ಷಣೆ ಮಾಡಲು ಅಗತ್ಯ ಕ್ರಮ ತೆಗೆದುಕೊಳ್ಳಬೇಕಾಗಿ ಸರ್ಕಾರಕ್ಕೆ ಆಗ್ರಹಿಸಿದೆ.

- Advertisement -
spot_img

Latest News

error: Content is protected !!