Thursday, June 25, 2026
Homeತಾಜಾ ಸುದ್ದಿಧರ್ಮಸ್ಥಳಕ್ಕೆ ರಿಲಯನ್ಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಭೇಟಿ

ಧರ್ಮಸ್ಥಳಕ್ಕೆ ರಿಲಯನ್ಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಭೇಟಿ

- Advertisement -
- Advertisement -

ಬೆಳ್ತಂಗಡಿ : ರಿಲಯನ್ಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ನಿಖಿಲ್ ಮೆಸ್ವಾನಿ ಕುಟುಂಬ ಸಮೇತ ಇಂದು ಬೆಳಗ್ಗೆ ದೆಹಲಿಯಿಂದ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಅಗಮಿಸಿದ್ರು. ನಂತರ ವಿಶೇಷ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳ ಹೆಲಿಪ್ಯಾಡ್ ಗೆ ಬೆಳಗ್ಗೆ 10 ಗಂಟೆಗೆ ಅಗಮಿಸಿದ್ದಾರೆ.

ಕಾರಿನ ಮೂಲಕ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹೋಗಿ ಅಲ್ಲಿ ಆಶ್ಲೇಷ ಪೂಜೆಗಳನ್ನು ನೆರವೇರಿಸಿ ಮಧ್ಯಾಹ್ನ ವಾಪಸ್ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆದು ನಂತರ ಭೋಜನ ಮಾಡಿ ಅಲ್ಲಿಂದ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಲಿದ್ದಾರೆ ಇಂದು ಸಂಜೆ 3:30 ಕ್ಕೆ ಹೆಲಿಕಾಪ್ಟರ್ ಮೂಲಕ ಮಂಗಳೂರಿಗೆ ವಾಪಸ್ ತೆರಳಿದ್ದಾರೆ.

ನಿಖಿಲ್ ಮೆಸ್ವಾನಿಗೆ ಮತ್ತು ಕುಟುಂಬಕ್ಕೆ ಖಾಸಗಿ ಭದ್ರತಾ ಸಿಬ್ಬಂದಿಗಳ ಜೊತೆ ಧರ್ಮಸ್ಥಳ ಪೊಲೀಸರು ಹಾಗೂ ಬೆಳ್ತಂಗಡಿ ಅಗ್ನಿಶಾಮಕ ಸಿಬ್ಬಂದಿಗಳು ಭದ್ರತೆ ಒದಗಿಸಿದ್ದಾರೆ

- Advertisement -

Latest News

error: Content is protected !!