Saturday, June 6, 2026
Homeಕರಾವಳಿವಿಟ್ಲ; ಕಾರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ  ಆರೋಪ; ದೂರು ದಾಖಲು

ವಿಟ್ಲ; ಕಾರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ  ಆರೋಪ; ದೂರು ದಾಖಲು

- Advertisement -
- Advertisement -

ಬಂಟ್ವಾಳ: ಕಾರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಕಂಬಳಬೆಟ್ಟು ಎಂಬಲ್ಲಿ ನಡೆದಿದೆ.
ವಿಟ್ಲ ಮುಡ್ನೂರು ಗ್ರಾಮದ ಕಂಬಳಬೆಟ್ಟು ಎಂಬಲ್ಲಿ ದರ್ಗಾದ ಬಳಿ ಕಾರಿನಲ್ಲಿ ಹೋಗುತ್ತಿದ್ದ ಮಹಮ್ಮದ್ ಸರ್ವಾನ್ ಮತ್ತು ಫಾರೂಕ್ ಎಂಬವರನ್ನು ಹಳೆಯ ದ್ವೇಷದ ಹಿನ್ನೆಲೆ  ಕಂಬಳಬೆಟ್ಟು ಉರಿಮಜಲು ನಿವಾಸಿಗಳಾದ ಜಸೀಲ್, ಇಸುಬು, ಜಿಯಾದ್, ಉಸ್ಮಾನ್, ಶರೀಫ್ ಹಾಗೂ ಇತರರು ಸೇರಿಕೊಂಡು ಬೈಕಿನಲ್ಲಿ ಬಂದು ಅಡ್ಡಗಟ್ಟಿ ಕಾರಿನಿಂದ ಹೊರಗಡೆ ಎಳೆದು ಹಲ್ಲೆ ನಡೆಸಿದ್ದಾರೆ ಮತ್ತೆ ಇವರ ಮೇಲೆ ಹಲ್ಲೆ ನಡೆಸುವುದನ್ನು ತಡೆ ಬಂದ ಸ್ಥಳೀಯರಿಗೆ ಜೀವಬೆದರಿಕೆ ಹಾಕಿದ್ದಾರೆ ಎಂಬ ವಿಟ್ಲ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

Latest News

error: Content is protected !!