Saturday, June 13, 2026
Homeಕರಾವಳಿವಿಟ್ಲದಲ್ಲಿ 40-50 ಅಡಿ ಆಳದ ಹೊಂಡಕ್ಕೆ ಬಿದ್ದ ಯುವತಿಯನ್ನು ರಕ್ಷಿಸಿದ ಫ್ರೆಂಡ್ಸ್ ವಿಟ್ಲ ತಂಡ

ವಿಟ್ಲದಲ್ಲಿ 40-50 ಅಡಿ ಆಳದ ಹೊಂಡಕ್ಕೆ ಬಿದ್ದ ಯುವತಿಯನ್ನು ರಕ್ಷಿಸಿದ ಫ್ರೆಂಡ್ಸ್ ವಿಟ್ಲ ತಂಡ

- Advertisement -
- Advertisement -

ವಿಟ್ಲ : ಇಲ್ಲಿನ ಅಳಿಕೆ ಗ್ರಾಮದ ಮೂಡಾಯಿಬೆಟ್ಟುವಿನ ಯುವತಿಯೋರ್ವರು ನಡೆದುಕೊಂಡು ಹೋಗುತ್ತಿದ್ದಾಗ ಆಕಸ್ಮಿಕವಾಗಿ 40-50 ಅಡಿ ಆಳದ ಹೊಂಡಕ್ಕೆ ಬಿದ್ದಿದ್ದರು. ತುಂಬಾ ಆಳವಾದ್ದರಿಂದ ಅವರಿಗೆ ಮೇಲಕ್ಕೆ ಬರಲು ಸಾಧ್ಯವಾಗಿರಲ್ಲಿಲ್ಲ. ಯುವತಿಯ ಕಿರುಚಾಟ ಕೇಳಿದ ಸ್ಥಳೀಯರು ಬಂದು ನೋಡಿದಾಗ ಆಕೆ ಒದ್ದಾಡುತ್ತಿದ್ದದ್ದು ಬೆಳಕಿಗೆ ಬಂದಿದೆ.

ಕೂಡಲೇ ಮುರಳಿ ವಿಟ್ಲ ನೇತೃತ್ವದ ಫ್ರೆಂಡ್ಸ್ ವಿಟ್ಲ ತಂಡದವರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಅವರು ಯುವತಿಯನ್ನು ಮೇಲಕ್ಕೆತ್ತಿ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಿಸಿದ್ದಾರೆ. ಫ್ರೆಂಡ್ಸ್ ವಿಟ್ಲ ತಂಡದವರಿಂದಾಗಿ ಯುವತಿ ಪುರ್ನಜನ್ಮ ಪಡೆದಿದ್ದಾರೆ.

- Advertisement -

Latest News

error: Content is protected !!