Thursday, February 22, 2024
Homeಕರಾವಳಿವಿಟ್ಲ: ಕರ್ಣಾಟಕ ಬ್ಯಾಂಕ್‌ನಲ್ಲಿ ದರೋಡೆ ಪ್ರಕರಣ; ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು

ವಿಟ್ಲ: ಕರ್ಣಾಟಕ ಬ್ಯಾಂಕ್‌ನಲ್ಲಿ ದರೋಡೆ ಪ್ರಕರಣ; ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು

- Advertisement -
- Advertisement -

ವಿಟ್ಲ: ಅಡ್ಯನಡ್ಕದಲ್ಲಿ ಶಾಖೆಯಲ್ಲಿ ನಡೆದ ಕೋಟ್ಯಂತರ ರೂಪಾಯಿ ಮೌಲ್ಯ ನಗ ನಗದು ಕಳ್ಳತನ ಪ್ರಕರಣ ಸಂಬಂಧಪಟ್ಟಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಪ್ರಕರಣದ ಕುರಿತಾಗಿ ತನಿಖೆ ನಡೆಸುತ್ತಿರುವ ಪೊಲೀಸರು ಬ್ಯಾಂಕ್‌ ಹಾಗೂ ಅಕ್ಕಪಕ್ಕ ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸಿದ್ದಾರೆ. ಇದರ ಆಧಾರದಲ್ಲಿ ಕಳ್ಳತನಕ್ಕೆ ಆಗಮಿಸಿದ್ದ ವಾಹನದ ಸುಳಿವು ಸಿಕ್ಕಿದ್ದು, ಮತ್ತಷ್ಟು ವಾಹನ ನಿಖರತೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ದೃಶ್ಯಾವಳಿ ಕಳುಹಿಸಲಾಗಿದೆ ಎನ್ನಲಾಗಿದೆ.

ಭಾರೀ ಮೊತ್ತದ ಕಳವು ನಡೆದ ಬಳಿಕ ಬ್ಯಾಂಕ್ ನನ್ನು ಸಂಪೂರ್ಣವಾಗಿ ಭದ್ರತೆಗೊಳಿಸಲಾಗುತ್ತಿದ್ದು, ಕಿಟಕಿಯನ್ನು ಸಂಪೂರ್ಣ ಬಂದ್ ಮಾಡಲಾಗುತ್ತಿದೆ. ಹಳೆ ಕಪಾಟುಗಳನ್ನು ಹೊರ ಹಾಕಿ ನವೀಕರಿಸಲಾಗುತ್ತಿದೆ.ಈಗ ಬ್ಯಾಂಕ್‌ನಲ್ಲಿ ಹೆಚ್ಚಿನ ಸುರಕ್ಷತಾ ಕ್ರಮ ಅಳವಡಿಸಲಾಗಿದ್ದು, ಸೋಮವಾರವೂ ಶಾಖೆ ಕಾರ್ಯ ನಿರ್ವಹಿಸುವುದು ಅನುಮಾನ ಎನ್ನಲಾಗಿದೆ.

- Advertisement -
spot_img

Latest News

error: Content is protected !!