ವಿಟ್ಲ: ಅಪ್ರಾಪ್ತ ಬಾಲಕಿಯನ್ನು ಮದುವೆಯಾಗಿ, ಗರ್ಭವತಿಯನ್ನಾಗಿಸಿದ ಆರೋಪದ ಮೇಲೆ ಪುತ್ತೂರಿನ ಕೋಡಿಂಬಾಡಿ ಗ್ರಾಮದ ಸೇಡಿಯಾಪು ನಿವಾಸಿಯೋರ್ವನ ವಿರುದ್ದ ವಿಟ್ಲ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ಅಪ್ರಾಪ್ತೆ ನೀಡಿದ ದೂರಿನಂತೆ ಶುಕ್ರವಾರ ಸಂಜೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಚಂದನ್ ಎಂದು ಗುರುತಿಸಲಾಗಿದೆ.
ಪ್ರಕರಣದ ವಿವರ:
ಕಳೆದ ಎರಡು ವರ್ಷಗಳಿಂದ ಅಪ್ರಾಪ್ತ ಬಾಲಕಿ ತನ್ನ ದೂರದ ಸಂಬಂಧಿಯಾದ ಚಂದನ್ ನನ್ನು ಪ್ರೀತಿಸುತ್ತಿದ್ದು, 2019ರ ಡಿಸೆಂಬರ್ 26 ರಂದು ಇವರಿಬ್ಬರೇ ಹೋಗಿ ಮದುವೆಯಾಗಿದ್ದರು. ನಂತರ ಅಪ್ರಾಪ್ತೆ ಹಾಗೂ ಚಂದನ್ ರವರು ಅಪ್ರಾಪ್ತೆಯ ಮನೆಯಲ್ಲಿಯೇ ವಾಸ್ತವ್ಯವಿರುತ್ತಿದ್ದ ಎನ್ನಲಾಗಿದೆ.
ಬುಧವಾರ ಸಂಜೆಯ ವೇಳೆಗೆ ಅಪ್ರಾಪ್ತ ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡು ಮಂಗಳೂರು ಸರಕಾರಿ ಲೇಡಿಗೋಷನ್ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಪ್ರಾಪ್ತ ಬಾಲಕಿ ಗರ್ಭವತಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ಬಾಲಕಿಗೆ 16 ವರ್ಷ 3 ತಿಂಗಳು ವಯಸ್ಸಾಗಿರುವ ಹಿನ್ನೆಲೆಯಲ್ಲಿ ಆರೋಪಿ ಚಂದನ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 71/2020 ಕಲಂ (u/c, -376) ಐಪಿಸಿ ಕಲಂ 4,6ಪೋಕ್ಸೋ ಕಾಯ್ದೆ ಯಡಿ ಪ್ರಕರಣ ದಾಖಲಿಸಲಾಗಿದೆ.