Wednesday, June 3, 2026
Homeಕರಾವಳಿವಿಟ್ಲದಲ್ಲಿ ಜಾಗದ ವಿಚಾರಕ್ಕೆ ಅಣ್ಣನನ್ನೇ ತಮ್ಮ ಕೊಲೆಗೈದ ಪ್ರಕರಣ; ಆರೋಪಿ ತಮ್ಮನನ್ನು ಬಂಧಿಸಿದ ಪೊಲೀಸರು

ವಿಟ್ಲದಲ್ಲಿ ಜಾಗದ ವಿಚಾರಕ್ಕೆ ಅಣ್ಣನನ್ನೇ ತಮ್ಮ ಕೊಲೆಗೈದ ಪ್ರಕರಣ; ಆರೋಪಿ ತಮ್ಮನನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ವಿಟ್ಲ: ಇಲ್ಲಿನ ವಿಟ್ಲಪಡ್ನೂರು ಗ್ರಾಮದ ಕೊಡಂಗೆ ಬನಾರಿ ಎಂಬಲ್ಲಿ ಜಾಗದ ವಿಚಾರವಾಗಿ ನಡೆದ ಗಲಾಟೆಯಲ್ಲಿ ಅಣ್ಣನನ್ನು ತಮ್ಮನೇ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿ ಪದ್ಮನಾಭ( 49) ನನ್ನು ಪೊಲೀಸರು ಬಂಧಿಸಿದ್ದಾರೆ.

ನಿನ್ನೆ ರಾತ್ರಿ ಪದ್ಮನಾಭ ಹಾಗೂ ಸಹೋದರ ಗಣೇಶ್ (53) ಮಧ್ಯೆ ಕುಡಿದ ಮತ್ತಿನಲ್ಲಿ ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಿತ್ತು. ಈ ವೇಳೆ ಪದ್ಮನಾಭ ಸಹೋದರ ಗಣೇಶ್ ಅವರನ್ನು ಕೊಲೆಗೈದಿದ್ದ. ಬಳಿಕ ನಾಪತ್ತೆಯಾಗಿದ್ದ. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

Latest News

error: Content is protected !!