- Advertisement -
![]()
- Advertisement -
ವಿಟ್ಲ; ಕೋಳಿ ಅಂಕ ನಡೆಯುತ್ತಿದ್ದಾಗ ಪೊಲೀಸರ ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿರುವ ಘಟನೆ ಪುಣಚ ಗ್ರಾಮದ ಪೆರಿಯಾಲ್ತಡ್ಕ ಎಂಬಲ್ಲಿ ನಡೆದಿದೆ. ಬಂಟ್ವಾಳ ಪುಣಚ ನಿವಾಸಿಗಳಾದ ದಿವಾಕರ ಪೂಜಾರಿ (46) ಹಾಗೂ ಯಶ್ವಂತ್ (34) ಬಂಧಿತರು.
ದಿನಾಂಕ:30.05.2026 ರಂದು ರಾತ್ರಿ, ಅಕ್ರಮ ಕೋಳಿ ಅಂಕ ಜೂಜಾಟದ ಬಗ್ಗೆ, ವಿಟ್ಲ ಪೊಲೀಸ್ ಠಾಣಾ ಉಪ ನಿರೀಕ್ಷಕರಾದ ರಾಮಕೃಷ್ಣ ರವರಿಗೆ ಮಾಹಿತಿ ಬಂದ ಮೇರೆಗೆ, ಠಾಣಾ ತೆರಳಿ ಪರಿಶೀಲಿಸಿದಾಗ, ಹಣವನ್ನು ಪಣವಾಗಿಟ್ಟು ಕೋಳಿ ಅಂಕದ ಜೂಜಾಟ ಆಡುತ್ತಿರುವುದು ಕಂಡುಬಂದಿರುತ್ತದೆ. ಈ ವೇಳೆ ಇಬ್ಬರನ್ನು ವಶಕ್ಕೆ ಪಡೆದು ಇತರೆ ಸೊತ್ತುಗಳನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
- Advertisement -


