- Advertisement -
- Advertisement -
ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಜವಾದ್, ಶಾಹಿದ್ ಮತ್ತು ರಿಯಾಝ್ @ ಅಬ್ದುಲ್ ಗಫೂರ್ ಎಂದು ಗುರುತಿಸಲಾಗಿದೆ. 2026ರ ಫೆಬ್ರವರಿಯಿಂದ ಆಗಸ್ಟ್ ಅವಧಿಯಲ್ಲಿ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಸಂತ್ರಸ್ತ ಬಾಲಕ ಸೆಪ್ಟೆಂಬರ್ 4ರಂದು ದೂರು ನೀಡಿದ್ದನು. ಈ ದೂರಿನನ್ವಯ ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ (ಪ್ರಕರಣ ಸಂಖ್ಯೆ: 185/2026 ರಿಂದ 190/2026) ಒಟ್ಟು 6 ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ಪ್ರಕರಣದಲ್ಲಿ ಭಾಗಿಯಾಗಿದ್ದ ಇತರ ಮೂವರು ಸೇರಿದಂತೆ ತನಿಖೆ ಮುಂದುವರಿದಿದ್ದು, ಬಂಧಿತ ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
- Advertisement -


