Thursday, June 4, 2026
Homeಕರಾವಳಿವಿಟ್ಲ: ಬೈಕ್-ಲಾರಿ ನಡುವೆ ಅಪಘಾತ, ಸವಾರ ಸ್ಥಳದಲ್ಲೇ ಮೃತ್ಯು

ವಿಟ್ಲ: ಬೈಕ್-ಲಾರಿ ನಡುವೆ ಅಪಘಾತ, ಸವಾರ ಸ್ಥಳದಲ್ಲೇ ಮೃತ್ಯು

- Advertisement -
- Advertisement -

ವಿಟ್ಲ: ವಿಟ್ಲ- ಪುತ್ತೂರು ರಸ್ತೆಯ ಕಂಬಳಬೆಟ್ಟು ಬದನಾಜೆಯಲ್ಲಿ ಬೈಕ್ ಹಾಗೂ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಟು ಮತ್ತೊಬ್ಬರು ಗಂಭೀರ ಗಾಯಗೊಂಡಿದ್ದಾರೆ.

ಮೃತಪಟ್ಟ ಯುವಕನನ್ನು ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ಅಳಕೆ ನಿವಾಸಿ ಇಸ್ಮಾಯಿಲ್ ಎಂದು ಗುರುತಿಸಲಾಗಿದೆ.

ಪುತ್ತೂರು ಕಡೆಯಿಂದ ವಿಟ್ಲ ಕಡೆಗೆ ಆಗಮಿಸುತ್ತಿದ್ದ ಲಾರಿ ಬೈಕ್ ಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಇಬ್ಬರು ಬೈಕ್ ಸವಾರರು ರಸ್ತೆಗೆಸೆಯಲ್ಪಟ್ಟಿದ್ದಾರೆ. ಬೈಕ್ ಸವಾರ ಇಸ್ಮಾಯಿಲ್ ಮೃತಪಟ್ಟಿದ್ದು, ಸಹಸವಾರ ಗಂಭೀರ ಗಾಯಗೊಂಡಿದ್ದರು. ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Latest News

error: Content is protected !!