- Advertisement -
![]()
- Advertisement -
ವಿಟ್ಲ; ಸೈಕಲ್ ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಕೊಳ್ಳಾಡು ಗ್ರಾಮದ ತಾಳಿತ್ತನೂಜಿ ದೇವಸ್ಯದಲ್ಲಿ ನಡೆದಿದೆ. ದೇವಸ್ಯ ನಿವಾಸಿ ಆಸ್ಥ ಎಂಬವರ ಏಕೈಕ ಪುತ್ರ ಅಸೀಫ್ (11) ಮೃತ ಬಾಲಕ.
ಆಸೀಫ್ ಸ್ಥಳೀಯ ಮದರಸಾದಲ್ಲಿ ಆಯೋಜಿಸಲಾಗಿದ್ದ ಇಫ್ತಾರ್ ಕೂಟ ಕಾರ್ಯಕ್ರಮದಲ್ಲಿ ಭಾಗವಹಿಸಿ ಮನೆಗೆ ತನ್ನ ಸೈಕಲ್‌ನಲ್ಲಿ ಹಿಂತಿರುಗುವಾಗ ಪಂಜಿಗದ್ದೆ ಎಂಬಲ್ಲಿನ ರಸ್ತೆ ತಿರುವಿನಲ್ಲಿ ನಿಯಂತ್ರಣ ತಪ್ಪಿ ಕೆಳಕ್ಕೆ ಬಿದ್ದಿದ್ದಾನೆ.
ಗಂಭೀರ ಗಾಯಗೊಂಡಿದ್ದ ಆಸೀಫ್ ರನ್ನು ತಕ್ಷಣವೇ ಸ್ಥಳೀಯರು ಚಿಕಿತ್ಸೆಗಾಗಿ ತುಂಬೆಯ ಫಾದರ್ ಮುಲ್ಲರ್ ಆಸ್ಪತ್ರೆಗೆ ಕರೆದೊಯ್ದಿದ್ದರು.ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾನೆಂದು ಸ್ಥಳೀಯರು ತಿಳಿಸಿದ್ದಾರೆ. ಆಸೀಫ್ ಕೊಳ್ಳಾಡು ಗ್ರಾಮದ ತಾಳಿತ್ತನೂಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆರನೇ ತರಗತಿಯ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಎನ್ನಲಾಗಿದೆ.
- Advertisement -


