Wednesday, June 24, 2026
Homeಕರಾವಳಿಮಂಗಳೂರುವಿಟ್ಲ : ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿ, ಜಾತಿ ನಿಂದನೆ ಮಾಡಿ ಜೀವ ಬೆದರಿಕೆ ಒಡ್ಡಿದ ಪ್ರಕರಣ:...

ವಿಟ್ಲ : ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿ, ಜಾತಿ ನಿಂದನೆ ಮಾಡಿ ಜೀವ ಬೆದರಿಕೆ ಒಡ್ಡಿದ ಪ್ರಕರಣ: ಆರೋಪಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ

- Advertisement -
- Advertisement -

ವಿಟ್ಲ : ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿ, ಜಾತಿ ನಿಂದನೆ ಮಾಡಿ ಜೀವ ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಲಯ ಆರೋಪಿಗೆ ಶಿಕ್ಷೆ ವಿಧಿಸಿದೆ.

ದಿನಾಂಕ 07.10.2022ರಂದು ನಡೆದ ಈ ಘಟನೆಗೆ ಸಂಬಂಧಿಸಿದಂತೆ 11.10.2022ರಂದು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ತನಿಖೆಯನ್ನು ಆಗಿನ ಉಪವಿಭಾಗಾಧಿಕಾರಿಯಾದ ಪ್ರತಾಪ್ ಸಿಂಗ್ ಥೋರಾಟ್ (ಡಿವೈಎಸ್‌ಪಿ, ಬಂಟ್ವಾಳ ಉಪ ವಿಭಾಗ) ನಡೆಸಿ, ಅಗತ್ಯ ಸಾಕ್ಷ್ಯಾಧಾರಗಳನ್ನು ಕಲೆಹಾಕಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು.

ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆದು, ದಿನಾಂಕ 20/02/2026ರಂದು ಆರೋಪಿ ಉಸ್ಮಾನ್ ಅವರನ್ನು IPC ಕಲಂ 354, 506 ಹಾಗೂ SC/ST ಕಾಯ್ದೆಯ ಕಲಂ 3(1)(w), 3(2)(va) ಅಡಿಯಲ್ಲಿ ದೋಷಿ ಎಂದು ಘೋಷಿಸಲಾಗಿದೆ.

ನ್ಯಾಯಾಲಯವು IPC 354 ಹಾಗೂ SC/ST ಕಾಯ್ದೆಯ ಸಂಬಂಧಿತ ಕಲಂಗಳಡಿ ಒಂದು ವರ್ಷ ಸರಳ ಜೈಲು ಶಿಕ್ಷೆ ಹಾಗೂ ರೂ. 10,000 ದಂಡ ವಿಧಿಸಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿಯಾಗಿ ಆರು ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ. IPC 506 ಕಲಂ ಅಡಿಯಲ್ಲಿ ಆರು ತಿಂಗಳ ಸರಳ ಜೈಲು ಶಿಕ್ಷೆ ಹಾಗೂ ರೂ. 5,000 ದಂಡ ವಿಧಿಸಲಾಗಿದ್ದು, ದಂಡ ಪಾವತಿಸದಿದ್ದರೆ ಹೆಚ್ಚುವರಿಯಾಗಿ 15 ದಿನಗಳ ಜೈಲು ಶಿಕ್ಷೆ ಅನುಭವಿಸಬೇಕೆಂದು ಆದೇಶಿಸಿದೆ.ಈ ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾಗಿ ಜ್ಯೋತಿ ನಾಯ್ಕ ಸರ್ಕಾರದ ಪರವಾಗಿ ವಾದ ಮಂಡಿಸಿದರು.

- Advertisement -

Latest News

error: Content is protected !!