Tuesday, October 13, 2026
Homeಕರಾವಳಿಮಂಗಳೂರುವಿಟ್ಲ: ಕ್ರಿಕೆಟ್ ಪಂದ್ಯದ ಸ್ಕೋರ್ ವಿಚಾರ; ಯುವಕನ ಮೇಲೆ ಹಲ್ಲೆ, ಜೀವ ಬೆದರಿಕೆ

ವಿಟ್ಲ: ಕ್ರಿಕೆಟ್ ಪಂದ್ಯದ ಸ್ಕೋರ್ ವಿಚಾರ; ಯುವಕನ ಮೇಲೆ ಹಲ್ಲೆ, ಜೀವ ಬೆದರಿಕೆ

- Advertisement -
- Advertisement -

ವಿಟ್ಲ: ಕ್ರಿಕೆಟ್‌ ಪಂದ್ಯಾಟದ ವೇಳೆ ಸ್ಕೋರ್‌ ವಿಚಾರವಾಗಿ ಉಂಟಾದ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ, ಯುವಕನೊಬ್ಬನ ಮೇಲೆ ಮೂವರು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಘಟನೆ ಮಾಣಿ ಗ್ರಾಮ ಪಂಚಾಯತ್‌ ಮೈದಾನದಲ್ಲಿ ನಡೆದಿದೆ. ಈ ಸಂಬಂಧ ರಿಜ್ವಾನ್‌ (20) ಎಂಬುವವರು ವಿಟ್ಲ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಘಟನೆಯ ವಿವರ: ಅಕ್ಟೋಬರ್ 11ರಂದು ಮಾಣಿ ಗ್ರಾಮ ಪಂಚಾಯತ್ ಮೈದಾನದಲ್ಲಿ ನಡೆದ ಅಂಡರ್-18 ಕ್ರಿಕೆಟ್ ಪಂದ್ಯಾಟವನ್ನು ವೀಕ್ಷಿಸಲು ರಿಜ್ವಾನ್ ಸ್ನೇಹಿತರಾದ ಶರೀಫ್ ಮತ್ತು ನಶಾತ್ ತೆರಳಿದ್ದರು. ಮಧ್ಯಾಹ್ನ ಜಿಎಫ್‌ಸಿ ಗಡಿಯಾರ ಮತ್ತು ಮಾಣಿ ತಂಡಗಳ ನಡುವಿನ ಪಂದ್ಯದ ವೇಳೆ ಸ್ಕೋರ್ ವಿಚಾರಕ್ಕೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಗಡಿಯಾರ ತಂಡದ ಸಮ್ಮಾಸ್ ಎಂಬಾತ ರಿಜ್ವಾನ್ ಸ್ನೇಹಿತ ನಶಾತ್‌ಗೆ ಅವಾಚ್ಯ ಶಬ್ದಗಳಿಂದ ಬೈದಿದ್ದಾನೆ.

ಇದನ್ನು ಪ್ರಶ್ನಿಸಿದ ರಿಜ್ವಾನ್ ಅವರ ತಲೆ ಹಾಗೂ ಮುಖದ ಭಾಗಕ್ಕೆ ಸಮ್ಮಾಸ್ ಹಾಗೂ ಆತನ ಇಬ್ಬರು ಸ್ನೇಹಿತರು ಸೇರಿ ಹಲ್ಲೆ ನಡೆಸಿದ್ದಾರೆ. ಸ್ಥಳದಲ್ಲಿದ್ದವರು ಗಲಾಟೆ ಬಿಡಿಸಲು ಮುಂದಾಗಿದ್ದು, ತೆರಳುವಾಗ ಆರೋಪಿ ಸಮ್ಮಾಸ್ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಹಲ್ಲೆಯಿಂದ ಗಾಯಗೊಂಡ ರಿಜ್ವಾನ್ ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದಿದ್ದು, ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!