Thursday, June 25, 2026
Homeಕರಾವಳಿಮಂಗಳೂರುವಿಟ್ಲ; ಪರವಾನಿಗೆಯ ಅವಧಿ ಮುಗಿದ ಬಳಿಕವೂ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ: ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ವಿಟ್ಲ; ಪರವಾನಿಗೆಯ ಅವಧಿ ಮುಗಿದ ಬಳಿಕವೂ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ: ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ವಿಟ್ಲ; ಪರವಾನಿಗೆಯ ಅವಧಿ ಮುಗಿದ ಬಳಿಕವೂ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ ಬಂಟ್ವಾಳ ಅಳಿಕೆ ಗ್ರಾಮದ ಕೋಟೆ ಎಂಬಲ್ಲಿ ನಡೆದಿದೆ. ಬಂಟ್ವಾಳ ಮೇರಮಜಲು ನಿವಾಸಿ  ರಂಜಿತ್ ಕುಮಾರ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.

ದಿನಾಂಕ 14-05-2026 ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪರವಾನಿಗೆಯ ಅವಧಿ ಮುಗಿದ ಬಳಿಕವೂ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿರುವುದಾಗಿ  ವಿಟ್ಲ ಪೊಲೀಸ್ ಠಾಣಾ  ಪೊಲೀಸ್ ಉಪನಿರೀಕ್ಷಕರಾದ ರಾಮಕೃಷ್ಣ ರವರಿಗೆ ಮಾಹಿತಿ ಬಂದ ಮೇರೆಗೆ, ಸದ್ರಿ ಸ್ಥಳಕ್ಕೆ ತೆರಳಿ ಪರಿಶೀಲಿಸಿ ಗಣಿಗಾರಿಕೆಗೆ ಸಂಬಂಧಿಸಿದ ದಾಖಲಾತಿಗಳನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮೂಲಕ ಪರಿಶೀಲಿಸಿದಾಗ, ಕೆಂಪುಕಲ್ಲು ಗಣಿಗಾರಿಕೆಯ ಪರವಾನಿಗೆಯು ದಿನಾಂಕ: 29.04.2026 ರಂದು ಮುಕ್ತಾಯಗೊಂಡಿರುವುದು ಧೃಢಪಟ್ಟಿದ್ದು,  ಆ ಪರವಾನಿಗೆ ಪತ್ರದಲ್ಲಿ ನಮೂದಿಸಲಾಗಿದ್ದ ದಿನಾಂಕವನ್ನು 29.05.2026 ಎಂಬುದಾಗಿ ತಿದ್ದಿರುವುದಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಆರೋಪಿ ರಂಜಿತ್ ಕುಮಾರ್ ವಿರುದ್ಧ ದಿನಾಂಕ 15-05-2026 ರಂದು ವಿಟ್ಲ ಪೊಲೀಸ್ ಠಾಣೆಯಲ್ಲಿ ಅಕ್ರ 110/2026, ಕಲಂ: 318(4), 336(3)  BNS 2023, ಕಲಂ: 4(1), 4(1A), 21 MMDR Act 1957, ಕಲಂ: 3,44 KMMC Rule 1994 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

- Advertisement -

Latest News

error: Content is protected !!