Wednesday, June 24, 2026
Homeಕರಾವಳಿಮಂಗಳೂರುವಿಟ್ಲ: ಮೇಯಲು ಬಿಟ್ಟಿದ್ದ ದನಗಳನ್ನು ಕಳ್ಳತನ ಮಾಡಿದ್ದ ಆರೋಪಿಯ ಬಂಧನ

ವಿಟ್ಲ: ಮೇಯಲು ಬಿಟ್ಟಿದ್ದ ದನಗಳನ್ನು ಕಳ್ಳತನ ಮಾಡಿದ್ದ ಆರೋಪಿಯ ಬಂಧನ

- Advertisement -
- Advertisement -

ವಿಟ್ಲ: ಮೇಯಲು ಬಿಟ್ಟಿದ್ದ ದನಗಳನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧನ ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲದ ಝುಲ್ಫಾನ್ ಮಾಲಿಕ್ ಉಳ್ಳಾಲ್ (30)  ಬಂಧಿತ ಆರೋಪಿ.

ದಿನಾಂಕ:18-11-2025 ರಂದು ಬಂಟ್ವಾಳ ತಾಲೂಕು ವಿಟ್ಲ ಪೊಲೀಸ್‌ ಠಾಣಾ ಸರಹದ್ದಿನ ಬಂಟ್ವಾಳ ತಾಲೂಕು ಪೆರುವಾಯಿ ಗ್ರಾಮದ ಸೊಸೈಟಿ ಆವರಣದಿಂದ ಹುಲ್ಲು ಮೇಯಲು ಹೋಗಿದ್ದ ಗಣೇಶ ರೈ ಹಾಗೂ ನಾರಾಯಣ ನಾಯ್ಕ ಎಂಬುವವರ ಒಟ್ಟು 04  ದನಗಳು ಕಳ್ಳತನವಾಗಿದ್ದರ ಬಗ್ಗೆ ಗಣೇಶ ರೈ ಎಂಬುವವರು ನೀಡಿದ ದೂರಿನಂತೆ ವಿಟ್ಲ ಪೊಲೀಸ್‌ ಠಾಣಾ ಅ.ಕ್ರ 169/2025 ರಂತೆ ದೂರು ದಾಖಲಾಗಿದ್ದು ಈ ಬಗ್ಗೆ ತನಿಖೆ ನಡೆಸಲಾಗಿ ದಿನಾಂಕ:08-01-2026 ರಂದು ಪ್ರಕರಣದ ಆರೋಪಿಯಾದ ಝುಲ್ಫಾನ್ ಮಾಲಿಕ್ ಉಳ್ಳಾಲ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿ ಪೊಲೀಸ್ ಕಸ್ಟ್ ಡಿಗೆ ತೆಗೆದುಕೊಳ್ಳಲಾಗಿದೆ. ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Latest News

error: Content is protected !!