- Advertisement -
![]()
- Advertisement -
ವಿಟ್ಲ; ಸರ್ಕಾರಿ ಜಾಗದಲ್ಲಿ ಸಿಡಿಮದ್ದು ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಅಬ್ದುಲ್ ಗಫೂರ್ (51) ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ವಿಟ್ಲ ಮುಡ್ನೂರು ಗ್ರಾಮದ ಕಂಬಳೆಬೆಟ್ಟು ನೂಜಿ ಎಂಬಲ್ಲಿ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಸಿಡಿಮದ್ದು ತಯಾರಿಸುತ್ತಿದ್ದ ವೇಳೆ ಸ್ಫೋಟ ಸಂಭವಿಸಿತ್ತು. ವಿಟ್ಲ ಮುಡ್ನೂರು ಗ್ರಾಮದ ನಿವಾಸಿ ಅಬ್ದುಲ್ ಗಫೂರ್ ಯಾವುದೇ ಪರವಾನಗಿ ಇಲ್ಲದೆ ಸರ್ಕಾರಿ ಜಮೀನಿನಲ್ಲಿ ಅಪಾಯಕಾರಿ ಸ್ಫೋಟಕಗಳನ್ನು ತಯಾರಿಸುತ್ತಿದ್ದ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಶನಿವಾರ ಆರೋಪಿಯನ್ನು ಬಂಧಿಸಿದ ಪೊಲೀಸರು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
- Advertisement -


