Tuesday, November 3, 2026
Homeಪ್ರಮುಖ-ಸುದ್ದಿಕಸ್ತೂರಿರಂಗನ್ ವರದಿ ವಿರುದ್ಧ ಧ್ವನಿ; ಸ್ಥಳೀಯರ ಭೂಹಕ್ಕಿಗೆ ಧಕ್ಕೆ ತರಬೇಡಿ; ಮುನಿಯಾಲು ಉದಯಕುಮಾರ್ ಶೆಟ್ಟಿ ಆಗ್ರಹ

ಕಸ್ತೂರಿರಂಗನ್ ವರದಿ ವಿರುದ್ಧ ಧ್ವನಿ; ಸ್ಥಳೀಯರ ಭೂಹಕ್ಕಿಗೆ ಧಕ್ಕೆ ತರಬೇಡಿ; ಮುನಿಯಾಲು ಉದಯಕುಮಾರ್ ಶೆಟ್ಟಿ ಆಗ್ರಹ

- Advertisement -
- Advertisement -

ಹೆಬ್ರಿ: ಕಸ್ತೂರಿರಂಗನ್ ವರದಿ ಜಾರಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಕೇಂದ್ರ ಸರ್ಕಾರ ಕೂಡಲೇ ಹಿಂಪಡೆಯಬೇಕು. ವರದಿ ಜಾರಿಯಿಂದ ಸ್ಥಳೀಯರ ಭೂಹಕ್ಕು ಹಾಗೂ ಜೀವನೋಪಾಯಕ್ಕೆ ಯಾವುದೇ ರೀತಿಯ ಧಕ್ಕೆ ಉಂಟಾಗಬಾರದು ಎಂದು ಕಾಂಗ್ರೆಸ್ ಮುಖಂಡ ಮುನಿಯಾಲು ಉದಯಕುಮಾರ್ ಶೆಟ್ಟಿ ಆಗ್ರಹಿಸಿದ್ದಾರೆ.

ಕಸ್ತೂರಿರಂಗನ್ ವರದಿ ಬಾಧಿತ ಪ್ರದೇಶಗಳ ಜನರ ಸಮಸ್ಯೆಗಳು ಹಾಗೂ ಅಹವಾಲುಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 18ರಂದು ಹೆಬ್ರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಲಿದ್ದು, ಕಸ್ತೂರಿರಂಗನ್ ವರದಿ ಬಾಧಿತ ಪ್ರದೇಶಗಳ ಜನರನ್ನು ಭೇಟಿ ಮಾಡಿ ಅವರ ಅಹವಾಲುಗಳನ್ನು ಆಲಿಸಲಿದ್ದಾರೆ ಎಂದು ಮುನಿಯಾಲು ಉದಯಕುಮಾರ್ ಶೆಟ್ಟಿ ತಿಳಿಸಿದ್ದಾರೆ.

- Advertisement -

Latest News

error: Content is protected !!