Monday, May 6, 2024
Homeಕರಾವಳಿಮತದಾರರ ಪಟ್ಟಿ ಪರಿಷ್ಕರಣೆ ಅನ್ನೋದು ಕೆಜಿಎಫ್ ಚಿತ್ರದ ರಾಕಿಭಾಯ್ ನ ಸೇಡಿನ ಕಥೆಯೂ ಅಲ್ಲ: ಕಾಂತಾರದ...

ಮತದಾರರ ಪಟ್ಟಿ ಪರಿಷ್ಕರಣೆ ಅನ್ನೋದು ಕೆಜಿಎಫ್ ಚಿತ್ರದ ರಾಕಿಭಾಯ್ ನ ಸೇಡಿನ ಕಥೆಯೂ ಅಲ್ಲ: ಕಾಂತಾರದ ಗುಳಿಗ, ಪಂಜುರ್ಲಿಯ ದಂತಕಥೆಯೂ ಅಲ್ಲ: ಸಿದ್ದರಾಮಯ್ಯ

spot_img
- Advertisement -
- Advertisement -

ಬೆಂಗಳೂರು ನಗರದಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿಬಂದಿದೆ. 2018ರಿಂದ ಚಿಲುಮೆ ಸಂಸ್ಥೆಗೆ ಮತದಾನದ ಜಾಗೃತಿಗೆ ಅನುಮತಿ ನೀಡಲಾಗಿದೆ. ಚಿಲುಮೆ ಸಂಸ್ಥೆಯು ಈ ಹಿಂದೆ ಹೊಂಬಾಳೆ ಹೆಸರಿನಲ್ಲಿ ಚಟುವಟಿಕೆಯಲ್ಲಿತ್ತು ಎನ್ನುವುದು ವಿವಾದಕ್ಕೆ ಕಾರಣವಾದ ಅಂಶ.

ಚಿತ್ರೋದ್ಯಮದ ಬಹುತೇಕರಿಗೆ ಗೊತ್ತಿರುವಂತೆ ಹೊಂಬಾಳೆ ಫಿಲ್ಮಸ್ ಸಂಸ್ಥೆಯು ಅಶ್ವತ್ಥ್ ನಾರಾಯಣ್ ಅವರ ಸಂಬಂಧಿ ವಿಜಯ್ ಕುಮಾರ್ ಅವರದ್ದು. ಈ ಹೊಂಬಾಳೆ ಫಿಲ್ಮಸ್ ಬ್ಯಾನರ್ ನಲ್ಲಿ ಕೆಜಿಎಫ್, ಕಾಂತಾರ ಸೇರಿದಂತೆ ಹಲವು ಚಿತ್ರಗಳು ನಿರ್ಮಾಣಗೊಂಡಿವೆ. ‘ಹೊಂಬಾಳೆ’ ಎನ್ನುವ ಹೆಸರೇ ಮತದಾರರ ಪಟ್ಟಿಯ ವಿವಾದಕ್ಕೆ ಮುನ್ನುಡಿಯಾಗಿದ್ದು, ಇದು ಚಿಲುಮೆ ಎನ್ನುವ ಹೆಸರಿನ ಸಂಸ್ಥೆಯ ಜೊತೆ ತಳುಕುಹಾಕಿಕೊಂಡಿದೆ.  ಹೊಂಬಾಳೆ ಹೆಸರು ಕೇಳಿ ಬರುತ್ತಿದ್ದಂತೆಯೇ ಆದ ಘಟನೆಗೂ ಅಶ್ವತ್ಥ್ ನಾರಾಯಣ್ ಅವರಿಗೆ ನೇರ ಸಂಬಂಧವಿದೆ ಎನ್ನುವುದು ಕಾಂಗ್ರೆಸ್ ಪಕ್ಷದ ಆರೋಪ.

ಇದೀಗ ಈ ಬಗ್ಗೆ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ ಮತದಾರರ ಪಟ್ಟಿ ಪರಿಷ್ಕರಣೆ ಎನ್ನುವುದು ಕೆಜಿಎಫ್ ಚಿತ್ರದ ರಾಕಿಭಾಯ್ ನ ಸೇಡಿನ ಕಥೆಯೂ ಅಲ್ಲ, ಕಾಂತಾರ ಚಿತ್ರದ ಗುಳಿಗ, ಪಂಜುರ್ಲಿಯ ದಂತಕಥೆಯೂ ಅಲ್ಲ. ಯಾರು ಯಾವ ಕೆಲಸ ಮಾಡಬೇಕೋ ಅದನ್ನೇ ಮಾಡಬೇಕು’ ಎಂದು ಟ್ವೀಟ್ ಮಾಡಿದ್ದಾರೆ. ಈ ಮೂಲಕ ಅಶ್ವಥ್‌ ನಾರಾಯಣ್‌ಗೆ ಟಾಂಗ್‌ ಕೊಟ್ಟಿದ್ದಾರೆ.

- Advertisement -
spot_img

Latest News

error: Content is protected !!