ಬಂಟ್ವಾಳ; ಮುಂಬರುವ ಲೋಕಸಭಾ ಚುನಾವಣೆಯ ಪೂರ್ವಭಾವಿಯಾಗಿ ಬಂಟ್ವಾಳ ಬಿಜೆಪಿ ಮಂಡಲದ ವತಿಯಿಂದ ಮತದಾರರ ಚೇತನಾ ಮಹಾಭಿಯಾನ ಕಾರ್ಯಕ್ರಮದ ಮಾಹಿತಿ ಸಭೆಯು ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಇಂದು ನಡೆಯಿತು. ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ಶ್ರೀ ದೇವಪ್ಪ ಪೂಜಾರಿ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಮಂಡಲದ ನಿಕಟಪೂರ್ವ ಅಧ್ಯಕ್ಷರು, ಮತದಾರರ ಚೇತನಾ ಮಹಾಭಿಯಾನದ ಜಿಲ್ಲಾ ಸಂಚಾಲಕರಾದ ಶ್ರೀ ದೇವದಾಸ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಕಸ್ತೂರಿ ಪಂಜ ಈ ಮಹಾಭಿಯಾನದ ಕಾರ್ಯ ಯೋಜನೆ ಮತ್ತು ಕಾರ್ಯಕ್ರಮಗಳ ಮಾಹಿತಿ ನೀಡಿದರು.
ಶಾಸಕರಾದ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಸಭೆಯನ್ನು ಉದ್ಧೇಶಿಸಿ ಮಾತಾಡಿದರು. ರಾಜ್ಯ ಬಿಜೆಪಿ ಅಧ್ಯಕ್ಷರು ಮತ್ತು ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್ ಮಾತಾಡುತ್ತಾ ” ಬಂಟ್ವಾಳ ಬಿಜೆಪಿಯೊಂದಿಗೆ ಸದಾ ನಿಕಟ ಸಂಪರ್ಕದಲ್ಲಿರುವ ಶಾಸಕ ರಾಜೇಶಣ್ಣನವರ ಸಹಕಾರದಿಂದ ಪ್ರತಿ ಬೂತಿನಲ್ಲಿ ಮತದಾರರ ಚೇತನಾ ಕಾರ್ಯವನ್ನು ಮೊದಲಿನಿಂದಲೇ ಮಾಡಿಕೊಂಡು ಬಂದಿದೆ. ಮತದಾರರ ಸೇರ್ಪಡೆ ಕಾರ್ಯದಲ್ಲಿ ಬಂಟ್ವಾಳ ಬೇರೆ ಕ್ಷೇತ್ರಗಳಿಗೆ ಮಾದರಿಯಾಗಿದೆ. ಮುಂದಿನ ದಿನಗಳಲ್ಲಿ ಈ ಮತದಾರರ ಚೇತನ ಮಹಾಭಿಯಾನವನ್ನು ಬಂಟ್ವಾಳವು ಅತ್ಯಂತ ಯಶಸ್ವಿಯಾಗಿ ನಡೆಸುವ ಎಲ್ಲಾ ಸಾಮರ್ಥ್ಯವನ್ನು ಹೊಂದಿದೆ ” ಎಂದರು.
ಈ ಸಭೆಯಲ್ಲಿ ಜಿಲ್ಲಾ ಬಿಜೆಪಿಯ ಉಪಾಧ್ಯಕ್ಷರಾದ ಶ್ರೀ ಹರಿಕೃಷ್ಣ ಬಂಟ್ವಾಳ್, ಪ್ರಧಾನ ಕಾರ್ಯದರ್ಶಿ ಶ್ರೀ ರಾಮದಾಸ್ ಬಂಟ್ವಾಳ್, ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ರಾಜ್ಯ ನಾಯಕಿ ಸುಲೋಚನಾ ಜಿ.ಕೆ.ಭಟ್, ಜಿಲ್ಲಾ ಬಿಜೆಪಿ ಮಾಧ್ಯಮ ಪ್ರಮುಖ್ ಶ್ರೀ ಸಂದೇಶ್ ಶೆಟ್ಟಿ, ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯರಾದ ಶ್ರೀ ದಿನೇಶ್ ಅಮ್ಟೂರು, ಮುಂತಾದವರು ಉಪಸ್ಥಿತರಿದ್ದರು. ಮಂಡಲ ಪದಾಧಿಕಾರಿಗಳು, ಜಿಲ್ಲಾ ಪ್ರಮುಖರು, ಮಹಾಶಕ್ತಿ ಕೇಂದ್ರದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಜನ ಪ್ರತಿನಿಧಿಗಳು, ಕ್ಷೇತ್ರ ಪ್ರಮುಖರು ಭಾಗವಹಿಸಿದ ಈ ಸಭೆಯಲ್ಲಿ ಕ್ಷೇತ್ರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಶ್ರೀ ಕಿಶೋರ್ ಪಲ್ಲಿಪಾಡಿ ವಂದೇ ಮಾತರಂ ಗೀತೆ ಹಾಡಿದರು. ಕ್ಷೇತ್ರ ಬಿಜೆಪಿ ಉಪಾಧ್ಯಾಕ್ಷರಾದ ಶ್ರೀ ವಜ್ರನಾಥ ಕಲ್ಲಡ್ಕ ಸ್ವಾಗತಿಸಿದರು. ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶ್ರೀ ಡೊಂಬಯ ಅರಳ ಕಾರ್ಯಕ್ರಮ ನಿರ್ವಹಿಸಿದರು