Wednesday, June 3, 2026
Homeತಾಜಾ ಸುದ್ದಿ80 ವರ್ಷ ಮೇಲ್ಪಟ್ಟವರಿಗೆ, ವಿಶೇಷ ಚೇತನರಿಗೆ ಇಂದಿನಿಂದ ಮನೆಯಿಂದಲೇ ಮತದಾನಕ್ಕೆ ಅವಕಾಶ

80 ವರ್ಷ ಮೇಲ್ಪಟ್ಟವರಿಗೆ, ವಿಶೇಷ ಚೇತನರಿಗೆ ಇಂದಿನಿಂದ ಮನೆಯಿಂದಲೇ ಮತದಾನಕ್ಕೆ ಅವಕಾಶ

- Advertisement -
- Advertisement -

ಬೆಂಗಳೂರು: 2023 ರ ವಿಧಾನಸಭಾ ಚುನಾವಣೆ ಮೇ 10 ರಂದು ನಡೆಯಿದ್ದು 80 ವರ್ಷ ಮೇಲ್ಪಟ್ಟವರಿಗೆ, ವಿಶೇಷ ಚೇತನರಿಗೆ ಇಂದಿನಿಂದ ಮನೆಯಿಂದಲೇ ಮತದಾನಕ್ಕೆ ಅವಕಾಶ ನೀಡಲಾಗಿದೆ.

ಈಗಾಗಲೇ ಈ ಬಗ್ಗೆ ಚುನಾವಣಾ ಆಯೋಗದಿಂದ ಮಾಹಿತಿ ಬಿಡುಗಡೆ ಮಾಡಲಾಗಿದೆ. ಏಪ್ರಿಲ್ 29ರಿಂದ ಮೇ.6ರವರೆಗೆ 80 ವರ್ಷ ಮೇಲ್ಪಟ್ಟವರಿಗೆ, ಅಂಗವಿಕಲರು ಹಾಗೂ ವಿಕಲಚೇತನರಿಗೆ ಚುನಾವಣಾ ಸಿಬ್ಬಂದಿಗಳು ಬ್ಯಾಲೆಟ್ ಪೇಪರ್ ನೀಡುವ ಮೂಲಕ ಮತದಾನ ಪ್ರಕ್ರಿಯೆಯನ್ನು ನಡೆಸಲಿದ್ದಾರೆ ಎಂದಿದೆ.

ಅಂದಹಾಗೇ ರಾಜ್ಯದಲ್ಲಿ 12.15 ಲಕ್ಷದಷ್ಟು 80 ವರ್ಷ ಮೇಲ್ಪಟ್ಟವರಿದ್ದಾರೆ. ಅವರಿಗೆಲ್ಲ ಇಂದಿನಿಂದ ಮನೆ ಮನೆಗೆ ತೆರಳಿ ಚುನಾವಣಾ ಸಿಬ್ಬಂದಿಗಳು ಬ್ಯಾಲೆಟ್ ಪೇಪರ್ ನೀಡಿ, ಮತದಾನ ಪ್ರಕ್ರಿಯೆಯನ್ನು ನಡೆಸಲಿದ್ದಾರೆ.

ಇನ್ನೂ ಬೆಂಗಳೂರಿನಲ್ಲಿ 80 ವರ್ಷ ಮೇಲ್ಪಟ್ಟವರ ಸಂಖ್ಯೆ 2 ಲಕ್ಷಕ್ಕೂ ಹೆಚ್ಚು ಮಂದಿ ಇದ್ದಾರೆ. ಇವರಲ್ಲಿ 9,152 ಮಂದಿ ಮತದಾರರು ಮನೆಯಿಂದಲೇ ಬ್ಯಾಲೆಟ್ ಪೇಪರ್ ವೋಟಿಂಗ್ ಮಾಡಲಿದ್ದಾರೆ.

- Advertisement -

Latest News

error: Content is protected !!