Thursday, June 4, 2026
Homeತಾಜಾ ಸುದ್ದಿವಿಟಿಯು ವಿದ್ಯಾರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್!

ವಿಟಿಯು ವಿದ್ಯಾರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್!

- Advertisement -
- Advertisement -

ಬೆಂಗಳೂರು: ಕೋವಿಡ್ ಕಾರಣದಿಂದ ಪರೀಕ್ಷೆ ಮುಂದೂಡಲ್ಪಟ್ಟು ಆತಂಕಕ್ಕೊಳಗಾಗಿದ್ದ ವಿಟಿಯು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಮುಂದೂಡಲ್ಪಟ್ಟಿದ್ದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪರೀಕ್ಷಾ ವೇಳಾಪಟ್ಟಿ ಪ್ರಕಟವಾಗಿದೆ.‌ ಬಾಕಿ ಉಳಿದಿರುವ ವಿವಿಯ ಮೊದಲ ಸೆಮಿಸ್ಟರ್ ಪರೀಕ್ಷೆಗೆ ದಿನಾಂಕ ನಿಗದಿಪಡಿಸಲಾಗಿದೆ. ಜುಲೈ 27 ರಿಂದ ಪ್ರಥಮ ಸೆಮಿಸ್ಟರ್ ಪರೀಕ್ಷೆ ಆರಂಭವಾಗಲಿದ್ದು ಆಗಸ್ಟ್ 03ರವರೆಗೆ ನಡೆಯಲಿದೆ.‌ ಇದರ ಜೊತೆಗೆ ಆಗಸ್ಟ್ 04 ರಿಂದ ಆಗಸ್ಟ್ 13ರವರೆಗೆ ವೈವಾ ಮತ್ತು ಪ್ರಾಯೋಗಿಕ ಪರೀಕ್ಷೆ ನಡೆಯಲಿದೆ.

ಕಳೆದ ಏಪ್ರಿಲ್ ತಿಂಗಳಿನಲ್ಲಿ ವಿಟಿಯು ಮೊದಲ ಸೆಮಿಸ್ಟರ್ ಪರೀಕ್ಷೆಗಳಿಗೆ ‌ದಿನಾಂಕ‌ ನಿಗದಿಯಾಗಿತ್ತು. ಆದರೆ ರಾಜ್ಯದಲ್ಲಿ ಕೊರೋನಾ ಸೋಂಕಿನ ಎರಡನೇ ಅಲೆ ತೀವ್ರಗೊಂಡ ಹಿನ್ನೆಲೆ ಪರೀಕ್ಷೆ ಮುಂದೂಡಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದೆ.‌

ಪರಿಷ್ಕೃತ ವೇಳಾಪಟ್ಟಿಯಂತೆ ಪರೀಕ್ಷೆಗಳು ರಾಜ್ಯ ಸರ್ಕಾರದ ಕೋವಿಡ್ ಮಾರ್ಗಸೂಚಿಯ ಅನುಸಾರವಾಗಿಯೇ ನಡೆಯಲಿದ್ದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪರೀಕ್ಷಾ ಸಮಯ ನಿಗದಿಯಾಗಿದೆ.

- Advertisement -

Latest News

error: Content is protected !!