Sunday, June 7, 2026
Homeಅಪರಾಧಪುತ್ತೂರು: ಕೆಲಸ ಮಾಡಿಸುತ್ತಿದ್ದ ಯುವತಿಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ಜಾತಿ ನಿಂದನೆ- ಬೆಳ್ಳಾರೆ...

ಪುತ್ತೂರು: ಕೆಲಸ ಮಾಡಿಸುತ್ತಿದ್ದ ಯುವತಿಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ಜಾತಿ ನಿಂದನೆ- ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲು

- Advertisement -
- Advertisement -

ಪುತ್ತೂರು: ಲೀಸಿಗೆ ಪಡೆದ ತೋಟದಲ್ಲಿ ಕೆಲಸ ಮಾಡಿಸುತ್ತಿದ್ದ ಯುವತಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದ ಪ್ರಕರಣದ ಬಗ್ಗೆ ಪುತ್ತೂರು ತಾಲೂಕಿನ ಮುಕ್ವೆ ನಿವಾಸಿಯ ವಿರುದ್ಧ ಬೆಳ್ಳಾರೆ ಠಾಣೆಯಲ್ಲಿ ಅಟ್ರಾಸಿಟಿ ಪ್ರಕರಣ ದಾಖಲಾಗಿದೆ.

ಪ್ರಕರಣದ ಆರೋಪಿಯನ್ನು ಜಾಗದ ಬ್ರೋಕರಿಂಗ್ ಮಾಡುವ ಮುಕ್ವೆ ನಿವಾಸಿ ಅಬ್ದುಲ್ ಮುನಾಫ್ ಎಂದು ಗುರುತಿಸಲಾಗಿದೆ.

ಆರೋಪಿಯು ಯುವತಿಗೆ ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾರೆ. ಬಳಿಕ ಜಾತಿ ನಿಂದನೆಗೈದು ಬೈದು ಹಲ್ಲೆ ನಡೆಸಿ ಮುಂದಕ್ಕೆ ನೋಡಿಕೊಳ್ಳುತ್ತೇನೆ ಜೀವ ಸಹಿತ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಒಡ್ಡಿದ್ದಾರೆಂದು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!