Thursday, June 4, 2026
Homeತಾಜಾ ಸುದ್ದಿಮಂಗಳೂರು: ಹಿಜಾಬ್‌ ಬೇಕೆನ್ನುವ ವಿದ್ಯಾರ್ಥಿನಿಯರಿಗೆ ಬೇರೆ ಕಾಲೇಜಿನಲ್ಲಿ ಪ್ರವೇಶ: ವಿವಿ ಕುಲಪತಿ ಡಾ.ಪಿ.ಎಸ್. ಯಡಪಡಿತ್ತಾಯ ಹೇಳಿಕೆ

ಮಂಗಳೂರು: ಹಿಜಾಬ್‌ ಬೇಕೆನ್ನುವ ವಿದ್ಯಾರ್ಥಿನಿಯರಿಗೆ ಬೇರೆ ಕಾಲೇಜಿನಲ್ಲಿ ಪ್ರವೇಶ: ವಿವಿ ಕುಲಪತಿ ಡಾ.ಪಿ.ಎಸ್. ಯಡಪಡಿತ್ತಾಯ ಹೇಳಿಕೆ

- Advertisement -
- Advertisement -

ಮಂಗಳೂರು: ತರಗತಿಯಲ್ಲಿ ಹಿಜಾಬ್ ಧರಿಸುವುದಾಗಿ ಹೇಳುವ ವಿದ್ಯಾರ್ಥಿನಿಯರಿಗೆ ಬೇರೆ ಕಾಲೇಜಿನಲ್ಲಿ ಪ್ರವೇಶ ಕಲ್ಪಿಸಲು ವ್ಯವಸ್ಥೆ ಮಾಡಲಾಗುವುದು ಎಂದು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ.ಪಿ.ಎಸ್. ಯಡಪಡಿತ್ತಾಯ ಹೇಳಿದರು.

ನಗರದ ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಇಂದು ನಡೆದ ತುರ್ತು ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ‘ಈ ವಿದ್ಯಾರ್ಥಿನಿಯರಿಗೆ ಆಪ್ತ ಸಮಾಲೋಚನೆ ಏರ್ಡಿಡಿಸುವ ಮೂಲಕ ಅವರ ನಿರ್ಧಾರವನ್ನು ಬದಲಿಸಲು ಪ್ರಯತ್ನಿಸಲಾಗುವುದು’ ಎಂದರು. ತರಗತಿಯ ಕೊಠಡಿಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸುವಂತೆ ಒತ್ತಾಯಿಸುತ್ತಿರುವ ಉಪನ್ಯಾಸಕರ ವಿರುದ್ಧ ತನಿಖೆ ನಡೆಸಿ, ಕ್ರಮ ಕೈಗೊಳ್ಳಲಾಗುವುದು ಎಂದರು. ಹೈಕೋರ್ಟ್ ಹಾಗೂ ಸರ್ಕಾರದ ಆದೇಶದ ಪ್ರಕಾರ, ಕ್ಯಾಂಪಸ್‌ನಲ್ಲಿ ಹಿಜಾಬ್ ಧರಿಸುವುದನ್ನು ನಿರ್ಬಂಧಿಸಲಾಗಿದೆ ಎಂದರು.

- Advertisement -

Latest News

error: Content is protected !!