Friday, September 25, 2026
Homeಕರಾವಳಿವಿಶ್ವ ಹೃದಯ ದಿನದ ಅಂಗವಾಗಿ ಸೆ.27ರಂದು ಮಂಗಳೂರಿನಲ್ಲಿ ವಾಕ್‌ಥಾನ್

ವಿಶ್ವ ಹೃದಯ ದಿನದ ಅಂಗವಾಗಿ ಸೆ.27ರಂದು ಮಂಗಳೂರಿನಲ್ಲಿ ವಾಕ್‌ಥಾನ್

- Advertisement -
- Advertisement -

ಮಂಗಳೂರು: ವಿಶ್ವ ಹೃದಯ ದಿನದ ಅಂಗವಾಗಿ ಹೃದಯದ ಆರೋಗ್ಯದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕೆಎಂಸಿ ಆಸ್ಪತ್ರೆ ಮಂಗಳೂರು ವತಿಯಿಂದ ಸೆ.27ರಂದು ‘ವಿಶ್ವ ಹೃದಯ ದಿನ ವಾಕ್‌ಥಾನ್ 2026’ ಆಯೋಜಿಸಲಾಗಿದೆ. ಬೆಳಗ್ಗೆ 6.15ಕ್ಕೆ ವಾಕ್‌ಥಾನ್ ಆರಂಭವಾಗಲಿದೆ ಎಂದು ಕೆಎಂಸಿ ಆಸ್ಪತ್ರೆಯ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ. ನರಸಿಂಹ ಪೈ ತಿಳಿಸಿದರು.

ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವರ್ಷದ ವಿಶ್ವ ಹೃದಯ ದಿನದ ‘Don’t Miss a Beat’ ಸಂದೇಶವು ಪ್ರತಿಯೊಬ್ಬರೂ ಹೃದಯದ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸುವ ಅಗತ್ಯವನ್ನು ಒತ್ತಿಹೇಳುತ್ತದೆ ಎಂದರು.

ಕಾರ್ಡಿಯಾಕ್ ಎಲೆಕ್ಟ್ರೋಫಿಸಿಯಾಲಜಿಸ್ಟ್ ಡಾ. ಮನೀಶ್ ರೈ ಮಾತನಾಡಿ, ರೋಗಿಗಳಿಗೆ ಚಿಕಿತ್ಸೆ ನೀಡುವುದರ ಜತೆಗೆ ಹೃದಯದ ಆರೋಗ್ಯದ ಕುರಿತು ಜನರಲ್ಲಿ ಅರಿವು ಮೂಡಿಸುವುದು ಸಂಸ್ಥೆಯ ಪ್ರಮುಖ ಉದ್ದೇಶವಾಗಿದೆ ಎಂದರು. ಕೆಎಂಸಿ ಆಸ್ಪತ್ರೆಯಲ್ಲಿ ಐವರು ಪೂರ್ಣಾವಧಿ ಹೃದ್ರೋಗ ತಜ್ಞರು, ಮೂವರು ಹೃದಯ ಶಸ್ತ್ರಚಿಕಿತ್ಸಕರು, ಒಬ್ಬ ಎಲೆಕ್ಟ್ರೋಫಿಸಿಯಾಲಜಿಸ್ಟ್ ಹಾಗೂ ಎರಡು ಕ್ಯಾಥ್ ಲ್ಯಾಬ್‌ಗಳ ಸೌಲಭ್ಯವಿದೆ ಎಂದು ತಿಳಿಸಿದರು.

ಕೆಎಂಸಿ ಆಸ್ಪತ್ರೆಯಿಂದ ಆರಂಭವಾಗುವ ವಾಕ್‌ಥಾನ್ ಡಾ. ಬಿ.ಆರ್. ಅಂಬೇಡ್ಕರ್ ವೃತ್ತ, ಬಲ್ಮಠ ರಸ್ತೆ, ತಾಜ್ ಮಹಲ್, ಮಿಲಾಗ್ರಿಸ್ ಚರ್ಚ್, ಐಎಂಎ ಹಾಲ್, ಅತ್ತಾವರ ಹಾಗೂ ಎಸ್.ಎಲ್. ಮಥಿಯಾಸ್ ರಸ್ತೆಯ ಮೂಲಕ ಮರೇನಾ ಸ್ಪೋರ್ಟ್ಸ್ ಕಾಂಪ್ಲೆಕ್ಸ್, ಕಾಪಿಗುಡ್ಡ ತಲುಪಲಿದೆ. ರಾಷ್ಟ್ರೀಯ ಮಟ್ಟದ ಕ್ರೀಡಾಪಟು ಸಾಕ್ಷಿ ಕ್ರಿಸ್ಟಿನಾ ಕಾರ್ಕಾಡ್ ಟಾರ್ಚ್‌ಬೇರರ್ ಆಗಿ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.

ವಾಕ್‌ಥಾನ್‌ನಲ್ಲಿ ಭಾಗವಹಿಸುವವರು ಕೆಂಪು ಬಣ್ಣದ ಉಡುಪು ಧರಿಸಲು ಪ್ರೋತ್ಸಾಹಿಸಲಾಗಿದ್ದು, ಉತ್ತಮ ಸಂಸ್ಥೆ, ಉತ್ಸಾಹಭರಿತ ಭಾಗವಹಿಸುವಿಕೆ, ಘೋಷಣೆ ಮತ್ತು ಫಲಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ಭಾಗವಹಿಸುವವರಿಗೆ ಉಪಾಹಾರದ ವ್ಯವಸ್ಥೆ ಮಾಡಲಾಗಿದ್ದು, ಮರೇನಾ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ನಿಂದ ವಾಕ್‌ಥಾನ್ ಆರಂಭಿಕ ಸ್ಥಳಕ್ಕೆ ಸಾರಿಗೆ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ನೋಂದಣಿ ಉಚಿತವಾಗಿದ್ದು, ಕಡ್ಡಾಯವಾಗಿದೆ. ಆಸಕ್ತರು ತಮ್ಮ ವಿವರಗಳನ್ನು +91 90081 67071 ಸಂಖ್ಯೆಗೆ ವಾಟ್ಸ್‌ಆ್ಯಪ್ ಮೂಲಕ ಕಳುಹಿಸಿ ನೋಂದಾಯಿಸಿಕೊಳ್ಳಬಹುದು.

ಪತ್ರಿಕಾಗೋಷ್ಠಿಯಲ್ಲಿ ಕೆಎಂಸಿ ಆಸ್ಪತ್ರೆಯ ಕ್ಲಸ್ಟರ್ ನಿರ್ದೇಶಕ ಪ್ರಮೋದ್ ಕುಂದರ್ ಉಪಸ್ಥಿತರಿದ್ದರು.

- Advertisement -

Latest News

error: Content is protected !!