Thursday, June 4, 2026
Homeತಾಜಾ ಸುದ್ದಿಸ್ಮಶಾನದಲ್ಲಿ ಚಾವಣಿ ಕುಸಿದು 15 ಮಂದಿ ಸಾವು

ಸ್ಮಶಾನದಲ್ಲಿ ಚಾವಣಿ ಕುಸಿದು 15 ಮಂದಿ ಸಾವು

- Advertisement -
- Advertisement -

ಗಾಜಿಯಾಬಾದ್: ಮಳೆಯಿಂದ ರಕ್ಷಿಸಿಕೊಳ್ಳಲು ಆಶ್ರಯ ಪಡೆದಿದ್ದ ಸ್ಮಶಾನದ ಚಾವಣಿ ಕುಸಿದು 15 ಮಂದಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಮುರಾದ್‌ನಗರದಲ್ಲಿ ಇಂದು ನಡೆದಿದೆ .

ಜೋರಾಗಿ ಬೀಳುತ್ತಿದ್ದ ಮಳೆಯಿಂದ ರಕ್ಷಣೆ ಪಡೆಯಲು ಸ್ಮಶಾನದ ಸಂಕೀರ್ಣವೊಂದರ ಚಾವಣಿಯಲ್ಲಿ 25 ಮಂದಿ ಆಶ್ರಯ ಪಡೆದಿದ್ದರು. ಮಳೆಗೆ ಚಾವಣಿ ಕುಸಿದು 15 ಮಂದಿ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಬಹುತೇಕರು ರಾಮ್ ಧವನ್ ಎನ್ನುವವರ ಶವಸಂಸ್ಕಾರಕ್ಕೆ ಬಂದಿದ್ದ ಸಂಬಂಧಿಕರು. ಶವಸಂಸ್ಕಾರ ನಡೆಯುತ್ತಿದ್ದ ವೇಳೆಯೇ ಈ ದುರ್ಘಟನೆ ಸಂಭವಿಸಿದೆ.

ಸ್ಥಳದಲ್ಲಿ ರಕ್ಷಣಾ ಕಾರ್ಯ ಕೈಗೊಳ್ಳಲಾಗಿದ್ದು, ಮೃತದೇಹಗಳನ್ನು ಅವಶೇಷಗಳಿಂದ ಹೊರಕ್ಕೆ ತೆಗೆಯುವ ಕೆಲಸ ನಡೆಯುತ್ತಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಗಾಜಿಯಾಬಾದ್ (ಗ್ರಾಮೀಣ) ಪೊಲೀಸ್ ವರಿಷ್ಠಾಧಿಕಾರಿ ಇರಾಜ್ ರಾಜಾ ತಿಳಿಸಿದ್ದಾರೆ.

ಘಟನೆಯಲ್ಲಿ ಮೃತಪಟ್ಟವರ ಬಗ್ಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸಂತಾಪ ವ್ಯಕ್ತಪಡಿಸಿದ್ದು, ‘ಮೃತರ ಸಂಬಂಧಿಕರಿಗೆ ತಲಾ ₹ 2ಲಕ್ಷ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

- Advertisement -

Latest News

error: Content is protected !!