Friday, June 5, 2026
Homeಕರಾವಳಿಸುಳ್ಯದಲ್ಲಿ ಹಳೆ ಮನೆ ಕೆಡವುತ್ತಿದ್ದಾಗ ಗೋಡೆ ಬಿದ್ದು ವ್ಯಕ್ತಿ ಸಾವು

ಸುಳ್ಯದಲ್ಲಿ ಹಳೆ ಮನೆ ಕೆಡವುತ್ತಿದ್ದಾಗ ಗೋಡೆ ಬಿದ್ದು ವ್ಯಕ್ತಿ ಸಾವು

- Advertisement -
- Advertisement -

ಸುಳ್ಯ: ಹಳೆ ಮನೆ ಕೆಡವುತ್ತಿದ್ದಾಗ ಗೋಡೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಸುಳ್ಯ ತಾಲೂಕಿನ ಪೆರಾಜೆ ಗ್ರಾಮದ ನಿಡ್ಯಮಲೆ ಎಂಬಲ್ಲಿ ನಡೆದಿದೆ. ನಾಗಪ್ಪ ನಾಯ್ಕ ಮೃತ ದುರ್ದೈವಿ.

ನಾಗಪ್ಪ ನಾಯ್ಕ ಹಾಗೂ ಅವರ ಮಗ ದರ್ಶನ್ ತಮ್ಮ ಹಳೆಯ ಮನೆಯನ್ನು ಕೆಡವುತ್ತಿದ್ದರು. ಈ ವೇಳೆ ಏಕಾಏಕಿ ಗೋಡೆ ಜರಿದಿದೆ.ಕೂಡಲೇ ನಾಗಪ್ಪ ನಾಯ್ಕ ಅವರು ಹಿಂದಕ್ಕೆ ಸರಿಯಲು ಯತ್ನಿಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ಗೋಡೆ ಅವರ ಮೇಲೆ ಬಿದ್ದಿದೆ. ಪರಿಣಾಮ ಅವರು ಮಣ್ಣಿನ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಕೂಡಲೇ ಅವರನ್ನು ಮೇಲಕ್ಕೆತ್ತಿ ಕೆವಿಜಿ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಅಲ್ಲಿಂದ ಮಂಗಳೂರಿಗೆ ಕರೆದುಕೊಂಡು ಹೋಗುವ ವೇಳೆ ಅವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ನಾಗಪ್ಪ ನಾಯ್ಕ ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

- Advertisement -

Latest News

error: Content is protected !!