Thursday, June 4, 2026
Homeಕರಾವಳಿಬೆಳ್ತಂಗಡಿ : 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯ ಬಂಧನ

ಬೆಳ್ತಂಗಡಿ : 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯ ಬಂಧನ

- Advertisement -
- Advertisement -

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 2012 ರಲ್ಲಿ ದಾಖಲಾಗಿದ್ದ ಗುರುವಾಯನಕೆರೆಯಲ್ಲಿ ಅಪಘಾತವಾಗಿ ಓರ್ವನ ಸಾವಿಗೆ ಕಾರಣವಾಗಿದ್ದ ಪ್ರಕರಣದಲ್ಲಿ  ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ  ವಾರಂಟ್ ಆರೋಪಿಯನ್ನು ಬಂಧಿಸಲಾಗಿದೆ.

ಸಯ್ಯದ್ ಅಬಸಾರ್ ಎಂಬವರ ಮಗನಾದ ಸಯ್ಯದ್ ಶಬೀರ್ (33) ಎಂಬಾತನನ್ನು ಜೂನ್ 12 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯ ಸಿಬ್ಬಂದಿಯಾದ ವೃಷಭ ಹಾಗು ಬಸವರಾಜ್ ರವರು  ಬೆಂಗಳೂರಿನ ಪೀಣ್ಯದಿಂದ ವಶಕ್ಕೆ ಪಡೆದು ಜೂನ್ 13 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಯನ್ನು ಷರತ್ತುಬದ್ದ ಜಾಮೀನಿನಲ್ಲಿ ಬಿಡುಗಡೆ ಮಾಡಿದೆ.

- Advertisement -

Latest News

error: Content is protected !!