Thursday, June 4, 2026
Homeಕರಾವಳಿಉಡುಪಿಮಂಗಳೂರು; ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿಯ ಸೆರೆ

ಮಂಗಳೂರು; ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿಯ ಸೆರೆ

- Advertisement -
- Advertisement -

ಮಂಗಳೂರು; ಹಲವು  ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಉಡುಪಿ ಮಂಚಿ ನಿವಾಸಿ ರಾಜೇಶ್ ನಾಯ್ಕ್ @ ರಾಜ್ @ ರಾಜು ಪಮಾಡಿ(48) ಬಂಧಿತ ಆರೋಪಿ.

ಆರೋಪಿಯನ್ನು ದಿನಾಂಕ: 14-07-2025 ರಂದು ಧಾರವಾಡ ಜಿಲ್ಲೆಯ ವಿದ್ಯಾಗಿರಿ ಎಂಬಲ್ಲಿಂದ ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಈತನ ವಿರುದ್ದ ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ 4 ಕಳವು ಪ್ರಕರಣ, ಮುಲ್ಕಿ ಪೊಲೀಸ್ ಠಾಣೆಯಲ್ಲಿ 4 ಕಳವು ಪ್ರಕರಣ, ಜೈಲ್ ನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಸಮಯ ಸಹಾ ಕೈದಿಗಳಿಗೆ ಹಾಗೂ ಜೈಲ್ ಸಿಬ್ಬಂದಿಯವರಿಗೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ 2 ಪ್ರಕರಣವು ಬರ್ಕೆ ಠಾಣೆಯಲ್ಲಿ ದಾಖಲಾಗಿರುತ್ತದೆ. ಅಲ್ಲದೇ ಉಡುಪಿ ಜಿಲ್ಲೆಯ ಮಣಿಪಾಲ,. ಹಿರಿಯಡ್ಕ, ಬೈಂದೂರು, ಉಡುಪಿ ನಗರ, ಕುಂದಾಪುರ, ಗಂಗೋಳ್ಳಿ, ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಹೊನ್ನಾವರ, ಧಾರವಾಡ ಜಿಲ್ಲೆಯ ಉಪನಗರ ಪೊಲೀಸ್ ಠಾಣೆಗಳಲ್ಲಿ ಕಳವು ಪ್ರಕರಣಗಳು ಸೇರಿದಂತೆ ಒಟ್ಟು 21 ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ. ಈತನ ವಿರುದ್ದ ವಿವಿಧ ನ್ಯಾಯಾಲಯಗಳಲ್ಲಿ ಒಟ್ಟು 10 ವಾರಂಟ್ ಇರುತ್ತದೆ. ಆರೋಪಿಯನ್ನು  ಸುರತ್ಕಲ್ ಠಾಣಾ ಸಿಬ್ಬಂದಿಯವರಾದ ಅಜಿತ್ ಮ್ಯಾಥ್ಯೂ,ಸುನಿಲ್ ರವರು ದಸ್ತಗಿರಿ ಮಾಡಿರುತ್ತಾರೆ.

- Advertisement -

Latest News

error: Content is protected !!